ಅವರೆಲ್ಲರೂ ಮನೆಯಿಂದ ಖುಷಿ ಖುಷಿಯಾಗಿ ಸಂಬಂಧಿಕರ ನಾಮಕರಣಕ್ಕೆ ಎಂದು ಹೊರಟಿದ್ದರು. ಇನ್ನೇನು ಕೆಲವೇ ನಿಮಿಷದಲ್ಲಿ ನಾಮಕರಣದಲ್ಲಿ ಭಾಗಿ ಆಗುತ್ತೇವೆ ಎಂದು ಕೊಂಡವರು, ಸೇರಿದ್ದ ಸ್ಮಶಾನಕ್ಕೆ. ಒಂದೇ ಕುಟುಂಬದ ಮೂವರ ಬಾಳಲ್ಲಿ ಇಂದು ವಿಧಿ ಆಟವಾಡಿದೆ. ಈ ಕುರಿತ ವರದಿ ಇಲ್ಲಿದೆ ನೋಡಿ……
ಹೌದು ಹೀಗೆ ನಜ್ಜುಗುಜ್ಜಾದ ಕಾರು, ಸ್ಥಳ ಪರಿಶೀಲನೆಗೆ ಮುಂದಾಗಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ, ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ನೆಲಮಂಗಲ ಸಮೀಪದ ಡಾಬಸ್ ಪೇಟೆ ಬಳಿ. ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಗೋಪಾಲ್(60) ಶಶಿಕಲಾ(55) ದೀಪಿಕಾ (35) ಸಾವನಪ್ಪಿದ್ದಾರೆ. ಶಶಿಕಲಾ ಮುಂಬದಿಯ ಸೀಟ್ ನಲ್ಲಿ ಕುಳಿತ್ತಿದ್ದರು, ಅವರ ಹಿಂಭಾಗದಲ್ಲಿ ದೀಪಿಕಾ ಕುಳಿತಿದ್ದರಿಂದ ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗಾಯಾಳು ಚಾಲಕ ಗೋಪಾಲ್ ರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಆತ ಕೂಡ ಸಾವನಪ್ಪಿದ್ದಾನೆ. ಇನ್ನೂ ಕಾರಿನಲ್ಲಿ ಇಬ್ಬರು ಮಕ್ಕಳಿದ್ದು, ಇಬ್ಬರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಆಗಿದ್ದರಿಂದ ಕಾರಿನ ವೇಗ ಕೂಡ ಹೆಚ್ಚಾಗಿತ್ತು. ಕಾರಿನ ರಭಸಕ್ಕೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಒಟ್ಟಾರೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಶುಭ ಕಾರ್ಯದಲ್ಲಿ ಭಾಗಿಯಾಗುತ್ತೇನೆ ಎಂದುಕೊಂಡಿದ್ದವರು, ಈಗ ಹೆಣವಾಗಿ ಸ್ಮಶಾನ ಸೇರಿದ್ದು ಮಾತ್ರ ವಿಧಿಯಾಟ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…