ವಿನಯ್‌ ಆತ್ಮಹತ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಸಚಿವ ಕೆ.ಜೆ ಜಾರ್ಜ್‌

ಕೊಡಗು ಜಿಲ್ಲೆಯ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಒಂದು ದುರಂತ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಯಾರದ್ದೇ ತಪ್ಪಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಅವರ ಸಾವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ”, ಎಂದರು.

“ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ನಾಯಕರ ಒತ್ತಾಯ ರಾಜಕೀಯವಲ್ಲವೇ? ಯಾರ ಮೇಲೆ ತನಿಖೆ ಮಾಡಬೇಕು ಎಂಬುದು ಪೊಲೀಸರಿಗೆ ಗೊತ್ತು. ಅವರು ತನಿಖೆ ಮಾಡುತ್ತಾರೆ. ಅದಕ್ಕೆ ಸಹಕರಿಸಬೇಕು”, ಎಂದರು.

ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರೊಂದಿಗೆ ವಿನಯ್ ಸೋಮಯ್ಯ ಸಂಪರ್ಕದಲ್ಲಿದ್ದರೇ ಎಂದು ಪ್ರಶ್ನಿಸಿದ ಅವರು, “ವಿನಯ್ ಸೋಮಯ್ಯ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಗುತ್ತಿತ್ತು. ಈ ವಿಚಾರದಲ್ಲಿ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ”, ಎಂದು ಹೇಳಿದರು.

“ಈ ಪ್ರಕರಣದ ಬಗ್ಗೆ ತನಿಖೆಯಾಗಿ ಸತ್ಯ ಹೊರಬರಲಿ. ಆದರೆ, ಕೆ.ಜಿ. ಬೋಪಯ್ಯ ಅವರನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ್ದರಿಂದ ಎ.ಎಸ್.ಪೊನ್ನಣ್ಣ ಮೇಲೆ ಬಿಜೆಪಿಯವರಿಗೆ ಸಿಟ್ಟು ಇದೆ. ಅದನ್ನು ಈ ರೀತಿ ತೋರಿಸುತ್ತಿದ್ದಾರೆ”, ಎಂದು ಆರೋಪಿಸಿದ ಸಚಿವ ಕೆ.ಜೆ.ಜಾರ್ಜ್, ಹೆಣದ ಮಲೆ ರಾಜಕೀಯ ಮಾಡುವುದನ್ನು ಬಿಟ್ಟು ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲಿ. ಅಷ್ಟೂ ತಾಳ್ಮೆ ಬಿಜೆಪಿಯವರಿಗೆ ಇಲ್ಲವೇ ಎಂದು ಪ್ರಆಶ್ನಿಸಿದರು.

“ಹಿಂದೆ ಡಿವೈಎಸ್ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ನನ್ನ ತಲೆಗೆ ಕಟ್ಟಲು ಇದೇ ಬಿಜೆಪಿಯವರು ಯತ್ನಿಸಿದ್ದರು. ವಿನಾ ಕಾರಣ ಆರೋಪ ಮಾಡಿದ್ದರಿಂದ ನನ್ನ ಕುಟುಂಬದವರು ಮಾನಸಿಕವಾಗಿ ನೋವು ಅನುಭವಿಸಿದ್ದರು. ಯಾರ ಮೇಲೂ ಈ ರೀತಿಯ ರಾಜಕೀಯ ಪ್ರೇರಿತ ಆರೋಪ ಮಾಡಬಾರದು”, ಎಂದು ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದರು.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

8 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

19 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago