ಕರ್ನಾಟಕ ವಿಧಾನಸಭೆಯ ವಿಪಕ್ಷದ ನಾಯಕನಾಗಿ ಆರ್.ಅಶೋಕ್ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.
ಆರ್ .ಅಶೋಕ್ ಅವರು ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕರಾಗಿದ್ದಾರೆ. ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು.
ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್. ಅಶೋಕ್ ಅವರನ್ನು ನೇಮಕ ಮಾಡಿದ್ದಾರೆ.