Categories: ರಾಜ್ಯ

ವಿಪಕ್ಷ ನಾಯಕ ಸ್ಥಾನ ಖಾಲಿ; ವಿರೋಧ ಪಕ್ಷದ ನಾಯಕ ಬೇಕಾಗಿದ್ದಾರೆ: ಬಿಜೆಪಿಯ ವಿಳಂಬ ಧೋರಣೆಗೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವ್ಯಂಗ್ಯ

ರಾಜ್ಯದಲ್ಲಿ ಮೇ.20ರಂದು ಸಿಎಂ ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳುಗಳು ಕಳೆದಿವೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ 66 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. 16ನೇ ವಿಧಾನಸಭೆಯ ಮೊದಲ ಜಂಟಿ ಅಧಿವೇಶನದ ಆರಂಭಕ್ಕೆ ಒಂದೇ ದಿನ ಬಾಕಿ ಇದ್ದರೂ, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಯಾರನ್ನೂ ಆಯ್ಕೆ ಮಾಡದೇ ಕೈಕಟ್ಟಿ ಕುಳಿತಿರುವ ಬಿಜೆಪಿ.

ವಿಪಕ್ಷ ನಾಯಕ ಸ್ಥಾನಕ್ಕೆ ಯಾವೊಬ್ಬ ನಾಯಕನ ಹೆಸರನ್ನು ಸೂಚಿಸಿದೆ ವಿಳಂಬ ಮಾಡುತ್ತಿರೋ‌‌ ಬಿಜೆಪಿ ನಡೆಯನ್ನ ಖಂಡಿಸುತ್ತಿರುವ ಕರ್ನಾಟಕ ಕಾಂಗ್ರೆಸ್.

ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಪಕ್ಷದಲ್ಲಿ ನಾಯಕರ ಕೊರತೆಯಾ? ಸಮರ್ಥ ನಾಯಕರಿಲ್ವಾ? ‘ಸಂತೋಷ ಕೂಟ’ ವಿಪಕ್ಷ ನಾಯಕನ ಸ್ಥಾನಕ್ಕೆ ಯಾವುದೇ ಹೆಸರು ಪ್ರಸ್ತಾಪಿಸಿಲ್ವಾ? ಯಡಿಯೂರಪ್ಪ ಅವರ ಬಣದ ನಾಯಕರನ್ನು ವಿಪಕ್ಷ ಸ್ಥಾನಕ್ಕೆ ಆಯ್ಕೆ ಮಾಡಲು ‘ಸಂತೋಷ ಕೂಟ’ ಅಡ್ಡಿಯಾಗಿದೆಯಾ? ನಮ್ಮ ಸಿಎಂ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡುವ ನಾಯಕರ ಕೊರತೆ ಇದೆಯಾ? ಎಂದು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರತಿದಿನ ವಿಧವಿಧವಾಗಿ ಪ್ರಶ್ನೆ ಮಾಡುತ್ತಾ ವ್ಯಂಗ್ಯ ಮಾಡುತ್ತಿದೆ.

ವಿಪಕ್ಷ ನಾಯಕರ ಹುದ್ದೆಗೆ ಟವಲ್ ಹಾಕಿರುವ ‘ಸಂತೋಷ ಕೂಟ’ದ ಕೈಗೊಂಬೆ ಬಸನಗೌಡ ಪಾಟೀಲ್ ಯತ್ನಾಳ್ ಆಸೆ ಕೇಂದ್ರ ನಾಯಕರು ಈಡೇರಿಸುತ್ತಾರಾ? ಈಡೇರಿಸಿದರೂ, ನಮ್ಮ ಸಿಎಂ ಮುಂದೆ ಗರ್ಜಿಸಲು ಸಶಕ್ತರಾ? ಎಂದು ಪ್ರಶ್ನೆ ಮಾಡಿರೋ ಕಾಂಗ್ರೆಸ್.

ನಿಮ್ಮ ಆಂತರಿಕ ಕಲಹ, ವೈಮನಸ್ಸು, ಭಿನ್ನಾಭಿಪ್ರಾಯ ಏನೇ ಇರಲಿ. ಮೊದಲಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ. ಸಂವಿಧಾನದಲ್ಲಿ ವಿರೋಧ ಪಕ್ಷದ ನಾಯಕನಿಗೆ ಮಹತ್ವವಿದೆ. ನಿಮ್ಮ ಬಣಗಳ ಗುದ್ದಾಟದಲ್ಲಿ ವಿಪಕ್ಷ ನಾಯಕನಿಗಿರುವ ಮಹತ್ವವನ್ನು ಕಳೆಯಬೇಡಿ. ಬಿಜೆಪಿಗೆ ಇನ್ನೂ ಸಹ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದರೆ ಭಾರಿ ಚೌಕಾಶಿ ವ್ಯವಹಾರ ನಡೆಯುತ್ತಿದೆ ಎಂದೇ ಅರ್ಥ ಎಂದು ಆರೋಪಿಸಿದ ಕಾಂಗ್ರೆಸ್.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಫಿಕ್ಸ್ ಆಗಿತ್ತು?, ವಿಪಕ್ಷ ನಾಯಕನ ಹುದ್ದೆಯನ್ನೂ ಮಾರಾಟಕ್ಕಿಡಲಾಗಿದೆಯೇ? ವಿಪಕ್ಷ ನಾಯಕನ ಹುದ್ದೆಗೆಷ್ಟು? ಪಕ್ಷದ ಅಧ್ಯಕ್ಷ ಹುದ್ದೆಗೆಷ್ಟು? ಇದಕ್ಕೆಲ್ಲಾ ಅಮಿತ್ ಶಾ ಉತ್ತರಿಸಬೇಕು! ಎಂದು ಆಗ್ರಹಿಸಿರೋ ಕಾಂಗ್ರೆಸ್

ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ. ನಾಯಕರೇ ಇಲ್ಲದ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ! ಎಂದು ಕಿಡಿಕಾರಿದ ಕಾಂಗ್ರೆಸ್

ಬಿಜೆಪಿ ಪಕ್ಷ ಆಡಳಿತ ಮಾಡಲು ಅಸಮರ್ಥರು ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ಅಸಮರ್ಥರು ಎಂದು ತಿಳಿಯುತ್ತಿದೆ ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ ಎಂದ ಕಾಂಗ್ರೆಸ್.

ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ. ಆದ್ದರಿಂದ ನಾವೇ ನಮಗೆ ವಿರೋಧ ಪಕ್ಷ ನಾಯಕ ಬೇಕಾಗಿದ್ದಾರೆ ಎಂದು ಹೇಳಿ ಖಾಲಿ ಖುರ್ಚಿ ಇರುವ ಪ್ರಕಟಣೆ ಹೊರಡಿಸಿರೋಕಾಂಗ್ರೆಸ್ ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ, RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಟ್ವಿಟರ್ ನಲ್ಲಿ ಪ್ರಕಟಣೆಯೊಂದನ್ನ ಪೋಸ್ಟ್ ಮಾಡಿರೋ ಕಾಂಗ್ರೆಸ್

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

8 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

9 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

14 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

16 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

18 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

20 hours ago