ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ಅವರು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಯಲ್ಲಿ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್ತಲಿನ ಊರುಗಳ 18 ರಿಂದ 20 ಸಾವಿರ ಯುವಕರು ಟ್ಯಾಕ್ಸಿ ಚಲಾಯಿಸುತ್ತಿದ್ದು, ಇವರನ್ನೇ ನಂಬಿಕೊಂಡು ಸುಮಾರು 1 ಲಕ್ಷ ಕುಟುಂಬ ಸದಸ್ಯರು ಇದ್ದಾರೆ. ಖಾಸಗಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು 15-20 ವರ್ಷಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ. ಇವರಲ್ಲಿ ಅನೇಕರು ಪ್ರಯಾಣಿಕರ ಜೊತೆ ನೇರ ಸಂಪರ್ಕ ಹೊಂದಿದ್ದು, ಅನೇಕ ವರ್ಷಗಳ ಪರಿಚಯದ ಮೂಲಕ ಸೇವೆ ನೀಡುತ್ತಿದ್ದಾರೆ. ಆದರೆ ಕಳೆದ ಡಿಸೆಂಬರ್‌ 8 ರಿಂದ 500 ಮೀಟರ್‌ ದೂರದಲ್ಲಿ ಚಾಲಕರಿಗೆ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಇದರಿಂದ ಸಮಸ್ಯೆ ಹೆಚ್ಚಿದೆ. ಈ ಹಿಂದೆ ನೀಡಿದ್ದ ಸ್ಥಳವನ್ನೇ ಈ ಚಾಲಕರಿಗೆ ನೀಡಬೇಕು. ಖಾಸಗಿ ಕಂಪನಿಗಳು 1,200-1,500 ರೂ. ದರ ನಿಗದಿ ಮಾಡಿದರೆ, ಈ ಚಾಲಕರು ಇನ್ನೂ ಕಡಿಮೆ ದರಕ್ಕೆ ಸೇವೆ ನೀಡುತ್ತಾರೆ. ಆದ್ದರಿಂದ ಇಲ್ಲಿ ಎಲ್ಲರಿಗೂ ಅವಕಾಶ ನೀಡಬೇಕಿದೆ. ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ದಟ್ಟಣೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಕನಿಷ್ಠ ಪ್ರಮಾಣದಲ್ಲಿ ಬಳಕೆದಾರರ ಶುಲ್ಕ ಪಡೆದು ಸ್ಥಳ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅಗ್ರಿಗೇಟರ್‌ಗಳು ಎಲ್ಲ ಕಡೆ ಇದ್ದು, ಯಾರ ಸೇವೆ ಬೇಕೆಂದು ಗ್ರಾಹಕರು ತೀರ್ಮಾನ ಮಾಡುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಧಾನ ಸಭೆಯಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಒಂದು ವಾರದಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ. ಖಾಸಗಿ ಟ್ಯಾಕ್ಸಿ ಚಾಲಕರಲ್ಲಿ ಎಲ್ಲರೂ ಕನ್ನಡಿಗರು ಹಾಗೂ ಸ್ಥಳೀಯ ನಿವಾಸಿಗಳು ಆಗಿದ್ದಾರೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಾಲಕರೇ ಇಲ್ಲಿದ್ದಾರೆ. ಇವರಲ್ಲಿ ಬಹಳಷ್ಟು ಜನರು ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ. ಆದ್ದರಿಂದ ಪ್ರಾಧಿಕಾರವು ಚಾಲಕರ ಜೊತೆ ಸಮನ್ವಯದಿಂದ ವರ್ತಿಸಬೇಕು. ಚಾಲಕರಿಗೆ ತೊಂದರೆಯಾಗದಂತೆ ಮೂರು ನಾಲ್ಕು ದಿನಗಳಲ್ಲಿ ಒಂದು ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೂಡ ಸಭೆ ಮಾಡಲಿದ್ದಾರೆ. ನಾನು ಸಹ ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ. ಅಗತ್ಯವಿದ್ದರೆ ನಾಗರಿಕ ವಿಮಾನಯಾನ ಸಚಿವರಾದ ಕೆ.ರಾಮಮೋಹನ್ ನಾಯ್ಡು ಅವರಿಗೆ ಮಾಹಿತಿ ನೀಡಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಪೊಲೀಸ್ ವರಿಷ್ಠರು, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಸೇರಿದಂತೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಟ್ಯಾಕ್ಸಿ ಚಾಲಕ ಸಂಘದ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

50 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

5 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

7 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

9 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

12 hours ago