ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಆರೋಪಿಯಿಂದ 1.38 ಕೋಟಿ ಮೌಲ್ಯದ 3.93 ಕೆ.ಜಿ. ಹೈಡ್ರೋಫೋನಿಕ್ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಹಾನೊಯ್ ನಗರದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನ ಬ್ಯಾಗ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ಅನುಮಾನಗೊಂಡು ತಪಾಸಣೆ ನಡೆಸಿದಾಗ, ಅದರೊಳಗೆ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿದೆ. ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿರುವ ಅಧಿಕಾರಿಗಳು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ–1985ರಡಿ ಪ್ರಕರಣ ದಾಖಲಿಸಲಾಗಿದ್ದು, ಗಾಂಜಾ ಕಳ್ಳಸಾಗಣೆಯ ಜಾಲ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಕುರಿತು ತನಿಖೆ ಮುಂದುವರಿದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!