ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿದ್ದ ಕ್ರೀಡಾಭಿಮಾನಿಗಳಿಗೆ ವಿರಾಟ್ ಕೊಹ್ಲಿ ಹಾಗೂ ಶುಭ್ ಮನ್ ಗಿಲ್ ಅವರ ಅದ್ಭುತ ಬ್ಯಾಟಿಂಗ್ ಹಾಗೂ ಮೊಹಮ್ಮದ್ ಸಿರಾಜ್ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡ ಶ್ರೀಲಂಕಾ ವಿರುದ್ಧ 317 ರನ್‌ಗಳ ಬೃಹತ್ ಗೆಲುವಿನ ಸಿಹಿ ಹಂಚಿದ್ದಾರೆ.
ಸರಣಿಯ ಮೊದಲ ಪಂದ್ಯದಲ್ಲಿ ದಾಖಲೆಯ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ 110 ಎಸೆತಗಳಲ್ಲಿ 13 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ (166) ರನ್‌ಗಳ ಸಿಡಿಲಬ್ಬರದ ಬ್ಯಾಟಿಂಗ್ ಹಾಗೂ ಆರಂಭಿಕ ಆಟಗಾರ ಶುಭ್ ಮನ್ ಗಿಲ್ 14 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ (116) ಪ್ರದರ್ಶನದ ನೆರವಿನಿಂದ 390 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿದರು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ ಮನ್ ಗಿಲ್ ಮೊದಲ ವಿಕೆಟ್ ಗೆ (94) ರನ್ ಪೇರಿಸುವ ಮೂಲಕ ಭದ್ರ ಅಡಿಪಾಯ ಹಾಕಿದರು, ರೋಹಿತ್ ಔಟಾದ ನಂತರ ಕ್ರಿಸ್ ಗೆ ಬಂದ ವಿರಾಟ್ ಕೊಹ್ಲಿ ಅಜೇಯರಾಗಿ ಉಳಿಯುವ ಮೂಲಕ ಶ್ರೀಲಂಕಾ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು.
ಬೃಹತ್ ಮೊತ್ತ ಬೆನ್ನಟ್ಟಿದ ಪ್ರವಾಸಿ ಲಂಕಾ ತಂಡದ ಆರಂಭ ಉತ್ತಮವಾಗಿರಲಿಲ್ಲ, ತಂಡದ ಮೊತ್ತ 7 ರನ್ ಗಳಿಸಿದ್ದ ಸಂದರ್ಭ ಅವಿಶ್ಕೋ ಫರ್ನಾಂಡೊ (1) ರನ್ ಗಳಿಸಿದ್ದಾಗ ಮೊಹಮ್ಮದ್ ಸಿರಾಜ್ ಆಘಾತ ನೀಡಿದರು, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ಗಳಾದ ಕುಶಾಲ್ ಮೆಂಡಿಸ್, ಅಸಲಂಕಾ, ನಾಯಕ ದಸುನ್ ಶನಕಾ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ ಬೇಗನೇ ಪೆವಿಲಿಯನ್ ಸೇರಿದರು.
ಭಾರತದ ಬೌಲಿಂಗ್ ವಿಭಾಗ ಅದ್ಬುತವಾದ ಪ್ರದರ್ಶನ ನೀಡಿತು, ಮೊಹಮ್ಮದ್ ಸಿರಾಜ್ ಒಂದು ಮೆಡನ್ ಸಹಿತ ಹತ್ತು ಓವರುಗಳಲ್ಲಿ 32 ರನ್ ನೀಡಿ 4 ವಿಕೆಟ್ ಪಡೆದರು, ಹಿರಿಯ ಬೌಲರ್ ಮೊಹಮ್ಮದ್ ಶಮಿ 6 ಓವರುಗಳಲ್ಲಿ 2 ಮೆಡನ್ ಸಮೇತ 20 ರನ್ ನೀಡಿ 2 ವಿಕೆಟ್ ಪಡೆಯುವ ಮೂಲಕ ಲಂಕಾ ಬ್ಯಾಟ್ಸ್‌ಮನ್ಗಳ ಬೆನ್ನು ಮೂಳೆ ಮುರಿದರು, ಇದರಿಂದಾಗಿ ಶ್ರೀಲಂಕಾ ತಂಡ 73 ರನ್ ಗಳಿಸಿ ಆಲೌಟ್ ಆಗುವ ಮೂಲಕ ಮಂಡಿಯೂರಿದರು.
ವರ್ಷದ ಅಂತ್ಯಕ್ಕೆ ನಡೆಯುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ನಡೆಯುತ್ತಿರುವ ದ್ವೀಪಕ್ಷಿಯ ಸರಣಿಯಲ್ಲಿ ಆರಂಭಿಕ ಆಟಗಾರು ಉತ್ತಮ ಪ್ರದರ್ಶನ ನೀಡುವ ಮೂಲಕ ಆರಂಭಿಕ ಸ್ಥಾನದ ಕೊರತೆ ನೀಗಿದಂತಾಗಿದೆ, ಕೊಟ್ಟ ಅವಕಾಶವನ್ನು ಬಳಸಿಕೊಂಡ
ಬ್ಯಾಟ್ಸ್‌ಮನ್ ಶುಭ್ ಮನ್ ಗಿಲ್ ಉತ್ತಮ ಪ್ರದರ್ಶನ ನೀಡುವ ಮೂಲಕ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…