ವಿವಿಧ ಇಲಾಖೆಗಳಲ್ಲಿ 34,863 ಹುದ್ದೆಗಳು ಖಾಲಿ: ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ- ಸಿಎಂ ಸಿದ್ದರಾಮಯ್ಯ

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದರು.

ಯುಪಿಎಸ್‌ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು‌ ಎಂದು ಸೂಚಿಸಿದರು.

ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಬೇಕು ಎಂದರು.

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಬೇಕು ಎಂದು ಹೇಳಿದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

5 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

8 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

9 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

11 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

11 hours ago