ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ತರಬೇತಿ.
ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ಕುರಿತ 30 ದಿನಗಳ ತರಬೇತಿ ಹಾಗೂ ನಿರುದ್ಯೋಗಿ ಯುವಕ-ಯುವತಿಯರಿಗೆ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಇನ್ಸ್ಟಾಲೇಶನ್ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಗಾಗಿ ಡಿಸೆಂಬರ್ 05 ರಂದು ನೇರ ಸಂದರ್ಶನ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಡಿಸೆಂಬರ್ 05 ರಂದು ನೇರವಾಗಿ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿಯ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ರುಡ್‌ಸೆಟ್ ಸಂಸ್ಥೆ, ಅರಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಡಿಸೆಂಬರ್ 05 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 080-27728166 (ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 6 ಗಂಟೆ), ಮೊಬೈಲ್ ಸಂಖ್ಯೆ: 9113880324, 9740982585, 8884554510, 8050549412, 9241482541 ಅನ್ನು ಸಂಪರ್ಕಿಸಬಹುದಾಗಿದೆ. ಎಂದು ರುಡ್‌ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕರಾದ ಜೆ.ಆನಂದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…