ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು. ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಐದು ಪ್ರಕರಣಗಳಿಗೆ ಸೇರಿದ ₹70 ಲಕ್ಷ ಮೌಲ್ಯದ 1 ಕೆ.ಜಿ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಇತರೆ ಮೂವರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದರು.
ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬೆಂಗಳೂರು ನಗರ ಪೊಲೀಸರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದರು.
ಇದೇ ರೀತಿ ಬೆಳ್ಳಂದೂರು ಪೊಲೀಸ್ ಠಾಣೆ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿ ₹22,50,000 ಮೌಲ್ಯದ 322 ಗ್ರಾಮ್ ಚಿನ್ನಾಭರಣ ಹಾಗೂ 71 ಗ್ರಾಮ್ ಕೃತಕ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದರು.
ಸಂಪಂಗಿರಾಮನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಚಿನ್ನದ ಮಳಿಗೆಯಲ್ಲಿ ಮಾಜಿ ಉದ್ಯೋಗಿ ಹಾಗೂ ಆತನ ಸಹಚರರನ್ನು ಕಳ್ಳತನದ ಆರೋಪದ ಮೇಲೆ ಬಂಧಿಸಿದ್ದಾರೆ. ಇವರಿಂದ ₹51.8 ಲಕ್ಷ ಮೌಲ್ಯದ 740 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಪರಾರಿಯಾಗಿರುವ ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಹೇಳಿದರು.
ಷೇರು ಮಾರಾಟ ಹಗರಣಕ್ಕೆ ಸಂಬಂಧಿಸಿದಂತೆ ಸೈಬರ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಆಕ್ಸಿಸ್ ಬ್ಯಾಂಕಿನ ಮ್ಯಾನೇಜರ್, ಮೂವರು ಸೇಲ್ಸ್ ಎಕ್ಷಿಕ್ಯೂಟಿವ್ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆಯಿಂದ ದೇಶದ ವಿವಿಧ ಭಾಗಗಳಲ್ಲಿ ಇಂತಹ 254 ಪ್ರಕರಣಗಳು ದಾಖಲಾಗಿವೆ. ಬಂಧಿತರು ತೆರೆದಿದ್ದ 6 ಬ್ಯಾಂಕ್ ಖಾತೆಗಳಲ್ಲಿ ₹97 ಕೋಟಿಯಷ್ಟು ವರ್ಗಾವಣೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ 9 ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದರು.
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…