ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023 ರ ಆಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ (ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು. ಆದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರ ಹಾಗೂ ಸಂಸ್ಥೆಗಳ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ನಮೂನೆಯಲ್ಲಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ 2023 ರ ಆಗಸ್ಟ್ 15 ರೊಳಗೆ ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಜಿಲ್ಲಾಡಳಿತ ಭವನ, ನಂ.03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಛೇರಿಗೆ ಸಲ್ಲಿಸಲು ಕೋರಿದೆ.
ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787441 ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು
ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…