ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ನವೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…