ವಿವಿಧ ಪ್ರಕರಣಗಳ ಆರೋಪಿಗಳ ಬಂಧನ: ಅಪಾರ ಮೌಲ್ಯದ ಮಾಲು ವಶ

ಎಸ್‌ಜೆ ಪಾರ್ಕ್ ಪೊಲೀಸ್‌ರು ರಾಜ್ಯದ ವಿವಿಧೆಡೆ ನಡೆದ ಅಕ್ರಮ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಯಶಸ್ವಿಯಾಗಿ ಬಂಧಿಸಿದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.

ಬಂಧಿತರಿಂದ 25ಗ್ರಾಂ ಬಂಗಾರದ ಆಭರಣಗಳು, 124ಗ್ರಾಂ ಬೆಳ್ಳಿಯ ವಸ್ತುಗಳು, ₹6000 ನಗದು, 3 ಕಾರುಗಳು ಮತ್ತು 6 ಬೈಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮಾ ಮೌಲ್ಯ ₹34.27 ಲಕ್ಷ. ಈ ಬಂಧನೆಯೊಂದಿಗೆ ಬೆಂಗಳೂರು, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 11 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ನಿಮ್ಮ ವಾಹನಗಳು ಮತ್ತು ಅಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳಿ. ಯಾವುದೇ ಶಂಕಾಸ್ಪದ ಚಟುವಟಿಕೆಯನ್ನು ನೋಡಿದರೆ ತಕ್ಷಣವೇ #Namma112 ಗೆ ಮಾಹಿತಿ ನೀಡಿ ಎಂದರು.

ತಲಘಟ್ಟಪುರ ಪೊಲೀಸರು ಜೆಎಚ್‌ಬಿಸಿಎಸ್ ಲೇಔಟ್‌ನಲ್ಲಿ ಹಗಲು ಮನೆ ಕಳ್ಳತನದಲ್ಲಿ ಭಾಗಿಯಾದ ಐವರು ವಿದೇಶಿ ನಾಗರಿಕರನ್ನು ಬಂಧಿಸಿದ್ದಾರೆ. ಬಂಧಿತರಿಂದ ₹50 ಲಕ್ಷ ಮೌಲ್ಯದ ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ 502 ಗ್ರಾಂ ಚಿನ್ನ ಮತ್ತು ವಜ್ರದ ಆಭರಣಗಳು, 4.5 ಕೆಜಿ ಬೆಳ್ಳಿಯ ವಸ್ತುಗಳು ಹಾಗೂ ಎರಡು ಮೊಬೈಲ್ ಫೋನ್‌ಗಳು ಸೇರಿವೆ. ಆರೋಪಿಗಳನ್ನು ಘಟನೆಯ 48 ಗಂಟೆಗಳ ಒಳಗೆ ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಗುಂಟೆ ಪಾಳ್ಯ ಪೊಲೀಸರು ಮನೆಕಳ್ಳತನ ಪ್ರಕರಣದಲ್ಲಿ, ಮನೆ ಕೆಲಸದಾತನನ್ನು ಬಂಧಿಸಿದ್ದು, ಬಂಧಿತನಿಂದ ಮನೆಯಲ್ಲಿ ಕದ್ದಿದ್ದ ಒಟ್ಟು ಸುಮಾರು ₹10 ಲಕ್ಷ ಮೌಲ್ಯದ 128 ಗ್ರಾಂ ಚಿನ್ನ ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮನೆಕೆಲಸದವರನ್ನು ನೇಮಿಸಿಕೊಳ್ಳುವ ಮೊದಲು ಅವರ ಸರಿಯಾದ ಹಿನ್ನೆಲೆಯನ್ನು ಪರಿಶೀಲನೆ ಮಾಡಿ ಎಂದು ನಗರದ ನಾಗರಿಕರಿಗೆ ಸಲಹೆ ನೀಡಲಾಗಿದೆ ಎಂದು ಹೇಳಿದರು.

ಸುಬ್ರಮಣ್ಯಪುರ ಠಾಣೆ ಪೊಲೀಸರು ಚಿನ್ನದ ಆಭರಣಗಳನ್ನು ಕದ್ದೊಯ್ದ ಪ್ರಮುಖ ಆರೋಪಿ ಮತ್ತು ಅವನ ಸಹಚರರನ್ನು ಬಂಧಿಸಿದ್ದು, 202.9 ಗ್ರಾಂ ತೂಕದ ₹16 ಲಕ್ಷ ಮೌಲ್ಯದ ಕಳವು ಮಾಡಿದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನುಳಿದ ಪರಾರಿಯಾಗಿರುವ ಆರೋಪಿಗಳನ್ನು ಪತ್ತೆಕಾರ್ಯ ಮುಂದುವರೆದಿದೆ ಎಂದರು.

ಅದೇ ರೀತಿ, ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯವರು ₹2.46 ಕೋಟಿ ನಗದು ಮತ್ತು ರೆಂಟಲ್ ಆ್ಯಪ್ ಮೂಲಕ ಬುಕ್ ಮಾಡಿದ ಇನೋವಾ ಕಾರು ಕದ್ದಿದ್ದ ಇಬ್ಬರನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ₹2,20,48,000 ನಗದು, ₹15 ಲಕ್ಷ ಮೌಲ್ಯದ ಇನೋವಾ ಕಾರು ಮತ್ತು ಕೃತ್ಯದಲ್ಲಿ ಬಳಸಿದ ಸ್ವಿಫ್ಟ್ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ—ಒಟ್ಟು ₹2.35 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

12 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

18 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

19 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

23 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

24 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago