ವಾಹನ ಕಳ್ಳತನದ ವಿರುದ್ಧ ನಡೆದ ಒಂದು ಪ್ರಮುಖ ಕಾರ್ಯಾಚರಣೆಯಲ್ಲಿ, ಬೆಂಗಳೂರು ನಗರ ಪೊಲೀಸರು (ಕಾಡುಗೊಂಡನಹಳ್ಳಿ, ಬಾಣಸವಾಡಿ ಮತ್ತು ಬಸವನಗುಡಿ ಪೊಲೀಸ್ ಠಾಣೆಗಳು) — ವಾಹನ ಕಳ್ಳತನ ಮತ್ತು ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಒಟ್ಟು 3 ಕಾರುಗಳು, 13 ದ್ವಿಚಕ್ರ ವಾಹನಗಳು ಮತ್ತು 1 ಐಫೋನ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ ₹20.14 ಲಕ್ಷಗಳಾಗಿವೆ. ಇದರಿಂದ 11 ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ನಾಗರಿಕರು ಸೂಕ್ತ ಲಾಕಿಂಗ್ ವ್ಯವಸ್ಥೆಯನ್ನು ಬಳಸಲು ಮತ್ತು ಸುರಕ್ಷಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಲು ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ಸಲಹೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.
ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ಮನೆಗಳ್ಳತನ, ಮೊಬೈಲ್ ಕಳ್ಳತನ ಮತ್ತು ದ್ವಿಚಕ್ರ ವಾಹನ ಕಳ್ಳತನಗಳಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 179 ಗ್ರಾಂ ಚಿನ್ನಾಭರಣಗಳು, 570 ಗ್ರಾಂ ಬೆಳ್ಳಿ ವಸ್ತುಗಳು, 5 ಮೊಬೈಲ್ ಫೋನ್‌ಗಳು ಮತ್ತು 4 ಕದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ – ಇವುಗಳ ಒಟ್ಟು ಮೌಲ್ಯ ₹20 ಲಕ್ಷಗಳಾಗಿವೆ. ಇದರಿಂದಾಗಿ ಸಿದ್ದಾಪುರ, ಆಡುಗೋಡಿ, ಕಬ್ಬನ್ ಪಾರ್ಕ್ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ 9 ಪ್ರಕರಣಗಳು ಪತ್ತೆಯಾಗಿವೆ. ಸಾರ್ವಜನಿಕರು ಮನೆಯಲ್ಲಿನ ಅಮೂಲ್ಯವಾದ ವಸ್ತುಗಳ ಬಗ್ಗೆ ಮತ್ತು ವಾಹನಗಳ ಬಗ್ಗೆ ಎಚ್ಚರದಿಂದಿದ್ದು, ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿದೆ, ವಿಶೇಷವಾಗಿ ಬೆಳಗಿನ ಸಮಯ ಹಾಗೂ ವಸತಿ ಪ್ರದೇಶಗಳಲ್ಲಿ ಅನುಮಾನಾಸ್ಪದ ನಡವಳಿಕೆ ಕಂಡುಬಂದಲ್ಲಿ ತಕ್ಷಣವೇ ವರದಿ ಮಾಡಲು ಸೂಚಿಸಲಾಗಿದೆ ಎಂದರು.
ಬೆಂಗಳೂರು ನಗರ ಪೊಲೀಸರ ಸಿಸಿಬಿ- (ವಿಶೇಷ ತನಿಖಾ ತಂಡ), 2025 ಏಪ್ರಿಲ್ 2 ರಿಂದ ಏಪ್ರಿಲ್ 18 ರವರೆಗಿನ ಕಾರ್ಯಾಚರಣೆಯಲ್ಲಿ, ಟಾಟಾ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಮತ್ತು ಬ್ಲ್ಯಾಕ್ ಮಾರ್ಕೆಟ್ ಟಿಕೆಟ್ ಮಾರಾಟವನ್ನು ಭೇದಿಸಿ, 09 ಪೊಲೀಸ್ ಠಾಣೆಗಳಲ್ಲಿ ಅನೇಕ ಶಂಕಿತರನ್ನು ಬಂಧಿಸಿ ಬಂಧಿತರಿಂದ ನಗದು, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟ ಬೆಟ್ಟಿಂಗ್ ನಿಂದ ಬಂದ ಹಣ ಹಾಗೂ ₹2 ಕೋಟಿಗೂ ಹೆಚ್ಚು ಮೌಲ್ಯದ ಚಿಪ್‌ಗಳು ಮತ್ತು 50 ಕ್ಕೂ ಹೆಚ್ಚು ಅಕ್ರಮ ಐಪಿಎಲ್ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಾಗರಿಕರು ಅಕ್ರಮ ಬೆಟ್ಟಿಂಗ್ ಅಥವಾ ಟಿಕೆಟ್ ಮರುಮಾರಾಟದಲ್ಲಿ ತೊಡಗಿಸಿಕೊಳ್ಳಬಾರದು ಅಥವಾ ಬೆಂಬಲಿಸಬಾರದು ಎಂದು ಸೂಚಿಸಲಾಗಿದೆ. ಅಂತಹ ಚಟುವಟಿಕೆಗಳು ಕಂಡುಬಂದರೆ #ನಮ್ಮ112 ಗೆ ವರದಿ ಮಾಡಿ ಎಂದು ತಿಳಿಸಿದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…