ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಧರಣಿ: ಸರ್ಕಾರ ಶೀಘ್ರವಾಗಿ ಸಮಸ್ಯೆಯನ್ನು ಇತ್ಯಾರ್ಥಪಡಿಸುವಂತೆ ಭಾ.ವಿ.ಪ ಮನವಿ

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ವಿವಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ತರಗತಿಗಳಲ್ಲಿ ಪಾಠಗಳು ನಡೆಯದೆ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗುವಂತಾಗಿದೆ. ಸರ್ಕಾರ ಶೀಘ್ರವಾಗಿ ಸಮಸ್ಯೆಯನ್ನು ಇತ್ಯಾರ್ಥ ಪಡಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಗ್ರೇಡ್-2 ತಹಶೀಲ್ದಾರ್ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು.

ಈ ಬಗ್ಗೆ ಮಾಹಿತಿ ನೀಡಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಣಿ ಸದಸ್ಯ ಎಸ್.ದರ್ಶನ್ ಕುಮಾರ್, ಕಾರ್ಯರ್ಶಿ ವಿ.ಆಕಾಶ್, ಎರಡು ವಾರಗಳಿಂದಲು ಅತಿಥಿ ಉಪನ್ಯಾಸಕರು ತಗತಿಗಳಿಂದ ಹೊರಗುಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗಿಂತಲು ಅತಿಥಿ ಉಪನ್ಯಾಸಕರ ಸಂಖ್ಯೆಯೇ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಉಪನ್ಯಾಸಕರ ಬೇಡಿಕೆಗಳ ಕುರಿತಂತೆ ಸರ್ಕಾರ ತುರ್ತು ಕ್ರಮ ಕೈಗೊಂಡು ತರಗತಿಗಳು ಸುಸೂತ್ರವಾಗಿ ನಡೆಯುವಂತೆ ಮಾಡಬೇಕಿದೆ.

ಸರ್ಕಾರಿ ಪದವಿ ಕಾಲೇಜುಗಳಿಗೆ ಸಾಮಾನ್ಯವಾಗಿ ಗ್ರಾಮೀಣ ಭಾಗದ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ  ವಿದ್ಯಾರ್ಥಿಗಳೇ ಹೆಚ್ಚಾಗಿ ಬರುವುದು. ವಾಸ್ತವ ಸ್ಥಿತಿ ಈಗಿರುವಾಗ ವಿದ್ಯಾರ್ಥಿಗಳು ಪಾಠ ಕೇಳುವಂದರಿಂದ ವಂಚಿತರಾಗುವಂತೆ ಆಗಲಿದೆ ಎಂದರು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾದ ಲಕ್ಷ್ಮೀಪತಿ, ಕುಶಾಲ್‌ ಸೇರಿದಂತೆ ಇತರರು  ಇದ್ದರು.

Leave a Reply

Your email address will not be published. Required fields are marked *