ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ವಿವಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ತರಗತಿಗಳಲ್ಲಿ ಪಾಠಗಳು ನಡೆಯದೆ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗುವಂತಾಗಿದೆ. ಸರ್ಕಾರ ಶೀಘ್ರವಾಗಿ ಸಮಸ್ಯೆಯನ್ನು ಇತ್ಯಾರ್ಥ ಪಡಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಗ್ರೇಡ್-2 ತಹಶೀಲ್ದಾರ್ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಣಿ ಸದಸ್ಯ ಎಸ್.ದರ್ಶನ್ ಕುಮಾರ್, ಕಾರ್ಯರ್ಶಿ ವಿ.ಆಕಾಶ್, ಎರಡು ವಾರಗಳಿಂದಲು ಅತಿಥಿ ಉಪನ್ಯಾಸಕರು ತಗತಿಗಳಿಂದ ಹೊರಗುಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗಿಂತಲು ಅತಿಥಿ ಉಪನ್ಯಾಸಕರ ಸಂಖ್ಯೆಯೇ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಉಪನ್ಯಾಸಕರ ಬೇಡಿಕೆಗಳ ಕುರಿತಂತೆ ಸರ್ಕಾರ ತುರ್ತು ಕ್ರಮ ಕೈಗೊಂಡು ತರಗತಿಗಳು ಸುಸೂತ್ರವಾಗಿ ನಡೆಯುವಂತೆ ಮಾಡಬೇಕಿದೆ.
ಸರ್ಕಾರಿ ಪದವಿ ಕಾಲೇಜುಗಳಿಗೆ ಸಾಮಾನ್ಯವಾಗಿ ಗ್ರಾಮೀಣ ಭಾಗದ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳೇ ಹೆಚ್ಚಾಗಿ ಬರುವುದು. ವಾಸ್ತವ ಸ್ಥಿತಿ ಈಗಿರುವಾಗ ವಿದ್ಯಾರ್ಥಿಗಳು ಪಾಠ ಕೇಳುವಂದರಿಂದ ವಂಚಿತರಾಗುವಂತೆ ಆಗಲಿದೆ ಎಂದರು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾದ ಲಕ್ಷ್ಮೀಪತಿ, ಕುಶಾಲ್ ಸೇರಿದಂತೆ ಇತರರು ಇದ್ದರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…