ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರ ನಿರ್ಲಕ್ಷ್ಯ ಮಾಡುತ್ತಿರೋ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಅಂಗನವಾಡಿ ಕಾರ್ಯಕರ್ತೆಯರು.
ಕಾರ್ಯಕರ್ತೆಯರಿಗೆ ಹೊಸ ಮೊಬೈಲ್ ಗಳನ್ನು ನೀಡಲು, 2023ರ ಬಜೆಟ್ ನಲ್ಲಿ ಹೆಚ್ಚಳವಾದ 1,000 ರೂ. ಗಳ ಗೌರವಧನ ಬಿಡುಗಡೆಗಾಗಿ ಒತ್ತಾಯಿಸಿ ಪ್ರತಿಭಟನೆ.
ಪೋಷಣ್ ಅಭಿಯಾನಕ್ಕೆ ಆಧಾರ್ ಅಥವಾ ಫೋನ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ ಎಂಬ ಆದೇಶವನ್ನು ಹಿಂಪಡೆಯಬೇಕೆಂದು ಪ್ರತಿಭಟನೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಸಿಡಿಪಿಒ ರವಿಕುಮಾರ್ ಮುಖೇನ ಮನವಿ ಮಾಡಲಾಯಿತು.
ತಮಗೆ ನೀಡಿರುವ ಹಳೇ ಮೊಬೈಲ್ ಹಿಂಪಡೆಯುವಂತೆ ಕಾರ್ಯಕರ್ತೆಯರು ಸಿಡಿಪಿಒಗೆ ಮುತ್ತಿಗೆ.