ವಿವಿಧ ಬೇಡಿಕೆಗಳ ಈಡೇರಿಕೆಗೆ ವಿವಿಧ ಸಂಘಟನೆಗಳ ಒಕ್ಕೊರಲ ಒತ್ತಾಯ: ಜನಸ್ನೇಹಿ ಆಡಳಿತಕ್ಕೆ ಒತ್ತು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು.

*ಸಂಘಟನೆಗಳ ಪ್ರಮುಖ ಬೇಡಿಕೆಗಳು*

– ಭ್ರಷ್ಟಾಚಾರ ರಹಿತ ಆಡಳಿತ
– ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು
– ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು
– ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ
– ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣುವುದು
– ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಲೇವಾರಿ
– ಸಾಗುವಳಿ ಚೀಟಿ ವಿತರಣೆ
– ಸರ್ಕಾರಿ ಜಾಗಗಳ ಒತ್ತುವರಿ ತೆರವು
– ನಿವೇಶನ, ವಸತಿ ಹಂಚಿಕೆ
– ಬಗರ್ ಹುಕುಂ ಜಮೀನು ವಿವಾದ
– ಕಡತಗಳ ಶೀಘ್ರ ವಿಲೇವಾರಿ
– ಇ.ಎಸ್.ಐ ಆಸ್ಪತ್ರೆ ಉದ್ಘಾಟನೆ
– ಹೊಸಕೋಟೆಯಲ್ಲಿ ಉಪವಿಭಾಗ ಸ್ಥಾಪಿಸುವುದು
– ಪೌತಿ ಖಾತೆ, ಪೋಡಿ ಇತ್ಯರ್ಥ

ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಂಘಟನೆಗಳ ಮುಖಂಡರಿಗೆ ಕರೆದಿದ್ದ ಸಭೆಯಲ್ಲಿ ಸಂಘಟನೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಈಗಾಗಲೇ ಪೌತಿ ಖಾತೆ ಆಂದೋಲನ ಶುರುವಾಗಿದ್ದು 6000 ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತದೆ. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಶುರು ಮಾಡಲಾಗಿದೆ. ಸೂಕ್ತ ದಾಖಲೆಗಳು ಇರುವ ಜಮೀನುಗಳನ್ನು ಮೊದಲು ಪೋಡಿ ಮಾಡಲಾಗುತ್ತಿದೆ ಎಂದರು.

ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ 200 ರಿಂದ 300 ಎಕರೆ ಸರ್ಕಾರಿ ಜಾಗ ಗುರ್ತಿಸಲಾಗಿದೆ. ಅಂದಾಜು 7000 ನಿವೇಶನಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 4000 ನಿವೇಶನಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ನಿವೇಶನ ರಹಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅರ್ಹರಿಗೆ ಹಂತ ಹಂತವಾಗಿ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದರು.

ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡಬೇಕು.‌ ಅಧಿಕಾರಿಗಳು ಜನಸಾಮಾನ್ಯರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳ ಬರದೇ ಇರೋ ಹಾಗೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಿತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಘಟನೆಗಳ ಮುಖಂಡರಿಗೆ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ನಾಲ್ಕು ತಾಲ್ಲೂಕು ತಹಶೀಲ್ದಾರ್ ಗಳು, ವಿವಿಧ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago