2024-25 ನೇ ಸಾಲಿನಲ್ಲಿ ಸುವಿಧಾ ಯೋಜನೆಯಡಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಅನ್ಲೈನ್ ವೇದಿಕೆಯಲ್ಲಿ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಅಳವಡಿಸಲಾಗಿದೆ.
ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೊಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ.
ಈ 13 ಯೋಜನೆಗಳಿಗೆ 2024-25 ನೇ ಸಾಲಿಗೆ ಅರ್ಹ ವಿಕಲಚೇತನರು ಆನ್ಲೈನ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾ ಸಿಂಧು (https://sevasindhu.karnataka.gov.in/Sevasindhu/Department Services) ಪೋರ್ಟಲ್ ನಲ್ಲಿ 2024 ರ ಅಗಸ್ಟ್ 31 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನಿಯಮಾನುಸಾರ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ:- ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ಹಾಗೂ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:080-29787441ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…