ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ವಿಳಾಸ kacdc.karnataka.gov.ing ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆ.18ಕ್ಕೆ ಕೊನೆ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು
1) ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು)
3) ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು
4) ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು,
5) ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
6) ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಕಲಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ ಶೇ.5% ಮೀಸಲಾತಿ ಇರಿಸಿದೆ.
7) ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)
ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು
1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಲ್ಲಿ ಕನಿಷ್ಠ ರೂ.50,000/- ಗಳಿಂದ ಗರಿಷ್ಠ ರೂ.1,00,000/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಅರ್ಹತೆಗಳು
1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2,00,000/-ಗಳ ಸಹಾಯಧನವನ್ನು ನೀಡಲಾಗುವುದು.
ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು
1) ಈ ಯೋಜನೆಯಡಿ 2 ರಿಂದ 05 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು.
2) ಅರ್ಜಿದಾರರಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
3) ಅರ್ಜಿದಾರರು 21 ವರ್ಷ ಮೇಲ್ಪಟ್ಟು 50 ವರ್ಷದ ಒಳಗಿನವರಾಗಿರಬೇಕು.
4) ಈ ಯೋಜನೆಯಡಿ ಗರಿಷ್ಠ ರೂ.2,00,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50,000/-ಗಳಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು
ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
1) ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು.
2) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. (ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು)
ಸಂಪರ್ಕ ವಿವರ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಸಂಖ್ಯೆ:-080-29605761.
ನಿಗಮದ ಸಹಾಯವಾಣಿ: 94484 51111 (ಬೆಳಿಗ್ಗೆ 10.00 ರಿಂದ ಸಂಜೆ 5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕ ಕಚೇರಿ, ಬೆಂಗಳೂರು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…