Categories: ರಾಜ್ಯ

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆ ಜಾರಿ: 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ- ಸಿಎಂ ಸಿದ್ದರಾಮಯ್ಯ

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು.

ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು, ಯುವತಿಯರು 130 ಕೋಟಿ 28 ಲಕ್ಷ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2,000 ರೂ ತಲುಪಿಸುತ್ತಿದ್ದೇವೆ‌.  ಇಂಥ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದು ನುಡಿದಂತೆ ಮಾಡಿ ತೋರಿಸಿದ ಸರ್ಕಾರ ಎಂದು ಹೇಳಿದ್ದಾರೆ.

ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಪ್ರತಿ ನಿರುದ್ಯೋಗಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ತಿಳಿಸಿದರು. 1985ರಲ್ಲಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಮೊದಲ ಬಾರಿಗೆ ವಿವೇಕಾನಂದ ಜಯಂತಿಯನ್ನು ಆರಂಭಿಸಿದರು ಎಂದರು.

ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭಾಷಣ ಮಾಡಿದರೆ ಸಾಲದು. ಅದಕ್ಕೆ ಕಾರ್ಯಕ್ರಮಗಳನ್ನು ರೂಪಿಸಬೇಕು, ಜಾರಿಗೆ ತರಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅದನ್ನೇ. ಹೋರಾಟದ ಹಿನ್ನೆಲೆಯ ಜಿಲ್ಲೆ ಶಿವಮೊಗ್ಗದಿಂದಲೇ “ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ” ಆಗಲಿ. ಇದಕ್ಕಾಗಿ ಜನಚಳವಳಿ ನಡೆಯಲಿ ಎಂದು ಹೇಳಿದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

1 hour ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

2 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

4 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

12 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

14 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago