ವಿಶೇಷ ಚೇತನರಿಗೆ ಗುಣಮಟ್ಟದ ಸೇವೆಗಳನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ- ಆಯುಕ್ತ ದಾಸ್ ಸೂರ್ಯವಂಶಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ವಿಕಲಚೇತನ ಪುನರ್ವಸತಿ ಕೇಂದ್ರದಲ್ಲಿ ಸಿಬಿಎಂ ಇಂಡಿಯಾ ಟ್ರಸ್ಟ್ ನಿಂದ ಆರ್ ಸಿಐನ 5ನೇ ಹಂತದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಅಂಗವಿಕಲ ಹಕ್ಕುಗಳ ಅಧಿನಿಯಮದ ಆಯೋಗದ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಉದ್ಘಾಟನೆ ಮಾಡಿದರು.

ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ, ಅನುಷ್ಠಾನ ಸಂಸ್ಥೆ ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆಯ ಅವರ ಸಹಯೋಗದಿಂದ ನಡೆಯುತ್ತಿರುವ ಪುನರ್ವಸತಿ ಕೇಂದ್ರ. ಸಮುದಾಯ ಆಧಾರಿತ ಅಂತರ್ಗತ ಅಭಿವೃದ್ಧಿ ಹಾಗೂ ಪುನರ್ವಸತಿ ಕೌನ್ಸಿಲ್ (CBID-RCI) ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು

ರಾಜ್ಯ ಅಂಗವಿಕಲ ಹಕ್ಕುಗಳ ಅಧಿನಿಯಮದ ಆಯೋಗದ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರವು ( ಅನುಷ್ಠಾನ ಸಂಸ್ಥೆ ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆ) ಮಾದರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ವಿಶೇಷ ಚೇತನ ಸಮುದಾಯಕ್ಕೆ ತಳಮಟ್ಟದಲ್ಲಿ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆದು ವಿಶೇಷ ಚೇತನ ಮಕ್ಕಳಿಗೆ ವೈದ್ಯಕೀಯ ಹಾಗೂ ಸಮುದಾಯ ಆಧಾರಿತ ಸೇವೆಗಳನ್ನು ಉಚಿತವಾಗಿ ಒದಗಿಸುತ್ತಿರುವುದು ಅಮೋಘ ಸೇವೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರವು ಪ್ರಾದೇಶಿಕ ವಿಕಲಚೇತನ ಪುನರ್ವಸತಿ ಕೇಂದ್ರವಾಗಿ ಬದಲಾವಣೆ ಆಗಿರುವುದು ಈ ವಿಭಾಗದ ಜಿಲ್ಲೆಗಳಿಗೆ ಬಹು ಉಪಯುಕ್ತವಾಗಿದ್ದು, ಇದರ ಸೇವೆಗಳನ್ನು ಈ ಪ್ರಾದೇಶಿಕ ವಿಭಾಗದ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ.

ಡಿಸೆಂಬರ್ ತಿಂಗಳಿನಿಂದ ರಾಜ್ಯದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ನೇರಳೆ ಹಬ್ಬ (Purple Festival)ವನ್ನು ಆಚರಿಸಿ ಒಂದು ಲಕ್ಷ ವಿಕಲಚೇತನರಿಗೆ ವಿವಿಧ ರೀತಿಯ ಸೇವೆಗಳನ್ನು ಒದಗಿಸಲು ಯೋಚಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಕಾರ ಮುಖ್ಯವಾಗಿರುತ್ತದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು.

ಹಾಗೆಯೇ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರು ಸ್ವ-ಸಹಾಯ ಸಂಘಗಳನ್ನು ಸ್ಥಾಪಿಸಿ ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಸಿಬಿಎಂ ಇಂಡಿಯಾ ಟ್ರಸ್ಟ್ ನಿರ್ದೇಶಕರಾದ ಪೆರೋಲಿನ್ ಸೋಜಿ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯದರ್ಶಿಗಳಾದ ಕ್ಯಾರಲಿನ್ ಎಲಿಜಬೆತ್, ಸಂಯೋಜಕರು ಶಿವಾನಂದ ಹಾಗೂ ತರಬೇತಿ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

8 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

9 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

21 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

21 hours ago