ವಿಶೇಷ ಚೇತನ ಮತ್ತು ಹಿರಿಯ ನಾಗರಿಕರ ಬಳಕೆಗೆ ನಿರ್ಮಿಸಿರುವ ಸೌಲಭ್ಯಗಳಿಗಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ‘ಎಸಿಐ’ನಿಂದ ಪ್ರತಿಷ್ಠಿತ ಮಾನ್ಯತೆ : ಈ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಂಡಳಿ (ಎಸಿಐ) ಕೊಡಮಾಡುವ “ಪ್ರವೇಶ ವರ್ಧಕ ಮಾನ್ಯತೆ” (ಎಇಎ) ಕಾರ್ಯಕ್ರಮದ ಅಡಿಯಲ್ಲಿ 1ನೇ ಹಂತದ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರು ಸುಲಲಿತವಾಗಿ ಸಂಚರಿಸಲು ಹಾಗೂ ಇತರ ಸೌಲಭ್ಯಗಳನ್ನು ಸರಳವಾಗಿ ಬಳಸಿಕೊಳ್ಳಲು ಸೂಕ್ತ ವ್ಯವಸ್ಥೆ ನಿರ್ಮಿಸಲಾಗಿದೆ. ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕ ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸುವ ಉದ್ದೇಶದಿಂದ ವಿಮಾನ ನಿಲ್ದಾಣದಲ್ಲಿ ಅಗತ್ಯ ಸೌಕರ್ಯ ಒದಗಿಸುವ ಎಇಎ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಇಎ ಮಾನ್ಯತೆ ಪಡೆಯಲು ಕಾರಣವಾಗಿದೆ.

ಎಇಎ ಮಾನ್ಯತೆಯು ಜಾಗತಿಕ ಬೇಡಿಕೆಗೆ ಅನುಗುಣವಾಗಿ ಸಾರ್ವತ್ರಿಕ ವಿನ್ಯಾಸ, ಲಭ್ಯವಿರುವ ಸೌಲಭ್ಯಗಳ ಮೌಲ್ಯಮಾಪನ, ಸುಧಾರಣೆಗಳನ್ನು ಕಾರ್ಯಗತಗೊಳಿಸುವುದು ಮತ್ತು ಅಂತಾರಾಷ್ಟ್ರೀಯ ಗುಣಮಟ್ಟವನ್ನು ವಿಮಾನ ನಿಲ್ದಾಣದಲ್ಲಿ ರೂಢಿಗತಗೊಳಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.
ಮೂರು ಪ್ರಗತಿಶೀಲ ಹಂತಗಳನ್ನು ಒಳಗೊಂಡಿರುವ “ಪ್ರವೇಶ ವರ್ಧಕ ಮಾನ್ಯತೆ”(AEA) ಕಾರ್ಯಕ್ರಮವು ವಿಮಾನ ನಿಲ್ದಾಣಗಳ ಕಾರ್ಯತಂತ್ರ, ನೀತಿ ನಿಯಮಗಳು ಮತ್ತು ಅವುಗಳಿಂದ ದೊರೆಯುವ ಫಲಿತಾಂಶಗಳನ್ನು ಮೌಲ್ಯಮಾಪನ ಮಾಡುತ್ತದೆ. ಪ್ರಯಾಣಿಕರು, ಸಂದರ್ಶಕರು ಮತ್ತು ಸಿಬ್ಬಂದಿ ಸೇರಿದಂತೆ ವಿಮಾನ ನಿಲ್ದಾಣದ ಎಲ್ಲ ಬಳಕೆದಾರರ ಪ್ರಯಾಣ ಅನುಭವದ ಅಭಿಪ್ರಾಯವನ್ನು ಆಧರಿಸಿ ಈ ಮಾನ್ಯತೆಯನ್ನು ನೀಡಲಾಗುತ್ತದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಡಿಮೆ ಚಲನಶೀಲತೆ ಹೊಂದಿರುವ (PRM) ಮತ್ತು ದಿವ್ಯಾಂಗ ವ್ಯಕ್ತಿಗಳಿಗೆ (PwDs) ಅನುಗುಣವಾಗಿ ಸೌಲಭ್ಯ, ಸಾರಿಗೆ ಮತ್ತು ಇತರ ಸೇವೆಗಳನ್ನು ಒದಗಿಸುವ ಕುರಿತು ಸಮಿತಿಯೊಂದು ಮೀಸಲಾಗಿದ್ದು, ಇದು ವಿಮಾನ ನಿಲ್ದಾಣದಲ್ಲಿ ದೊರೆಯುವ ಸೇವೆಗಳ ಮೇಲ್ವಿಚಾರಣೆ ಮಾಡುತ್ತದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯ ಬೆಂಬಲ ದೊರೆಯುವುದನ್ನು ಖಚಿತಪಡಿಸಿಕೊಳ್ಳಲು ಸಿಬ್ಬಂದಿಗಳಿಗೆ ಪೂರ್ವಭಾವಿ ತರಬೇತಿಯನ್ನು ನೀಡಲಾಗುತ್ತದೆ. ಜೊತೆಗೆ, ವಿಮಾನ ಪ್ರಯಾಣವನ್ನು ಎಲ್ಲರಿಗೂ ಒತ್ತಡ ಮುಕ್ತ ಮತ್ತು ಉಲ್ಲಾಸಮಯಗೊಳಿಸುವ ಕ್ರಮಗಳನ್ನು ಕೈಗೊಳ್ಳಲು ಸಹಕರಿಸುತ್ತದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಅವರು ಈ ಕುರಿತು ಮಾತನಾಡಿ, “ಎಸಿಐನಿಂದ ಪ್ರವೇಶ ವರ್ಧಕ ಮಾನ್ಯತೆ ದೊರೆತಿರುವುದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬರಿಗೂ ಸೂಕ್ತ ಸೌಲಭ್ಯ ಒದಗಿಸಲಾಗುತ್ತದೆ ಎಂಬುದನ್ನು ಪ್ರತಿಬಿಂಬಿಸುತ್ತದೆ. ಎಲ್ಲ ಟರ್ಮಿನಲ್‌ಗಳಲ್ಲಿ ನಮ್ಮ ಸಿಬ್ಬಂದಿಯನ್ನು ಸಬಲೀಕರಣಗೊಳಿಸಲು ಮತ್ತು ವಿಮಾನ ನಿಲ್ದಾಣದಲ್ಲಿನ ಇತರ ಸಂಸ್ಥೆಗಳ ಜೊತೆ ನಿರಂತರ ಸಹಯೋಗ ಸಾಧಿಸಲು ಕಳೆದ ಕೆಲವು ವರ್ಷಗಳಿಂದ ಹಲವಾರು ಉಪಕ್ರಮಗಳನ್ನು ಪರಿಚಯಿಸಿದ್ದೇವೆ. ವಿಮಾನ ನಿಲ್ದಾಣಕ್ಕೆ ಪ್ರತಿಯೊಬ್ಬರನ್ನೂ ಆತ್ಮೀಯವಾಗಿ ಸತ್ಕರಿಸುವ ನಮ್ಮ ಪ್ರಯತ್ನ ನಿರಂತರವಾಗಿ ಮುಂದುವರೆಯಲಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಇದೀಗ ಬೆಂಗಳೂರು ವಿಮಾನ ನಿಲ್ದಾಣ ಪಡೆದಿರುವ ಈ ಮಾನ್ಯತೆಯು ನಮ್ಮ ಇತರ ಕಾರ್ಯಕ್ರಮಗಳಾದ “ಬಿ-ಇನ್‌ಕ್ಲೂಡೆಡ್‌ ಮತ್ತು “ಸಹಾಯಕ ಸಾಧನ ನೀತಿ”ಗಳ ಮೂಲಕ ಮತ್ತಷ್ಟು ಬಲಗೊಳ್ಳಲಿದೆ. ಇದು ವೈವಿಧ್ಯಮಯ, ಎಲ್ಲರಿಗೂ ಸಮಾನ ಮತ್ತು ಎಲ್ಲರನ್ನೂ ಒಳಗೊಂಡ ಸಂಸ್ಥೆಯನ್ನು ರಚಿಸುವ ಮತ್ತು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವು 2022 ರಲ್ಲಿ ಸನ್‌ಫ್ಲಾವರ್‌ ಲ್ಯಾನ್ಯಾರ್ಡ್ ಯೋಜನೆಯನ್ನು ಪರಿಚಯಿಸಿದ್ದು, ಇದು ಗೋಚರಿಸದ ಅಂಗವೈಕಲ್ಯ ಹೊಂದಿರುವವರಿಗೆ ಅಗತ್ಯ ಸೌಲಭ್ಯ ನೀಡುವ ಉದ್ದೇಶವನ್ನು ಹೊಂದಿದೆ.

ಈ ಪ್ರಯತ್ನಗಳು ಸಂಚಾರ ಸಮಸ್ಯೆ ಮತ್ತು ದಿವ್ಯಾಂಗ ಹೊಂದಿರುವ ವ್ಯಕ್ತಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಪ್ರಯಾಣದುದ್ದಕ್ಕೂ ಒದಗಿಸುವುದಾಗಿದೆ. ಜೊತೆಗೆ, ಬೆಂಗಳೂರು ವಿಮಾನ ನಿಲ್ದಾಣವು ವಿಮಾನಯಾನ ಕ್ಷೇತ್ರದಲ್ಲಿ ಸಂಚಾರ ಸಮಸ್ಯೆ ಮತ್ತು ದಿವ್ಯಾಂಗತೆ ಹೊಂದಿರುವ ವ್ಯಕ್ತಿಗಳ ಅನುಭವದ ಮಾನದಂಡವನ್ನು ಹೊಸ ಎತ್ತರಕ್ಕೆ ಏರಿಸುವ ಗುರಿಯನ್ನು ಹೊಂದಿದೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

18 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

19 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

1 day ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

2 days ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

2 days ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

2 days ago