ವಿಶ್ವಕಪ್: ಬಾಂಗ್ಲಾವನ್ನು ಬಗ್ಗು ಬಡಿದ ಕೋಹ್ಲಿ: ರೋಹಿತ್ ಪಡೆಗೆ ನಾಲ್ಕನೇ ಗೆಲುವು

ವಿಶ್ವಕಪ್ ನಲ್ಲಿ ಭಜ೯ರಿ ಆರಂಭ ಪಡೆದಿರುವ ಭಾರತ ತಂಡ ತನ್ನ ಗೆಲುವಿನ ಓಟವನ್ನು ಬಾಂಗ್ಲಾದೇಶದ ವಿರುದ್ದವೂ ಮುಂದುವರಿದು ಅಜೇಯವಾಗಿ ಟೇಬಲ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿತು.

ಆಲ್ ರೌಂಡರ್ ಶಕಿಬ್ ಅಲ್ ಹಸನ್ ಅವರ ಅನುಪಸ್ಥಿತಿಯಲ್ಲಿ  ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ಶಾಂಟೋ ಬ್ಯಾಟಿಂಗ್ ಆಯ್ದುಕೊಂಡರು,  ಬಾಂಗ್ಲಾದೇಶದ ಆರಂಭಿಕ ಆಟಗಾರರಾದ ತಾನ್ಜಿನ್ ಹಸನ್ (51) ಹಾಗೂ ಲಿಟನ್ ದಾಸ್ (66) ರನ್ ಗಳಿಸಿ 93 ರನ್ ಗಳ ಭದ್ರ ಅಡಿಪಾಯ ಹಾಕಿದರು.

ಉತ್ತಮವಾಗಿ ಆಡುತ್ತಿದ್ದ ಬ್ಯಾಟಿಂಗ್ ಪಡೆಯನ್ನು ಬಲೆಗೆ ಬೀಳಿಸಿದ್ದು ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಬಲೆಗೆ ಬೀಳಿಸಿದರು, ನಂತರ ಬಂದ ಯಾವುದೇ ಬ್ಯಾಟ್ಸಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ.

ಆದರೆ ಮಧ್ಯಮ ಕ್ರಮಾಂಕದ ಆಟಗಾರರಾದ ರಹೀಮ್ (38) ಹಾಗೂ ಮೊಹಮದ್ ಉಲ್ಲಾ (46) ರನ್ ಗಳಿಸುವ ಮೂಲಕ ತಂಡವನ್ನು 250 ರ ಗಡಿ ದಾಟಿಸಿದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಸಿರಾಜ್ ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ ಶಾರ್ದುಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಒಂದು ವಿಕೆಟ್ ಪಡೆದರು ‌

ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಏಳು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ (48) ಹಾಗೂ ಶುಭಮನ್ ಗಿಲ್ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ಸಿಡಿಸಿ (53) ರನ್ ಗಳಿಸುವ ಮೂಲಕ 88 ರನ್ ಜೊತೆಯಾಟ ನಡೆಸಿ ಹಸನ್ ಮೊಹಮದ್ ಹಾಗೂ ಹಸನ್ ಮಿರ್ಜಾಗೆ ವಿಕೆಟ್ ಒಪ್ಪಿಸಿದರು.

ನಂತರ ಒಂದಾದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ನೆರವಿನಿಂದ (103)ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್(19) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ (34) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

4 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

7 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

15 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

19 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

22 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

24 hours ago