ವಿಶ್ವಕಪ್: ಭಾರತದ ಬೌಲಿಂಗ್ ದಾಳಿಗೆ ಬೆದರಿದ ಪಾಕ್, ಭಾರತಕ್ಕೆ ಏಳು ವಿಕೆಟ್ ಜಯ

ವಿಶ್ವಕಪ್ ನ ಹೈಹೊಲ್ಟೇಜ್ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಪಂದ್ಯದಲ್ಲಿ ಭಾರತ ತಂಡದ ಬಿಗಿ ಬೌಲಿಂಗ್ ದಾಳಿ ಹಾಗೂ ಬ್ಯಾಟಿಂಗ್ ಬಲದಿಂದ ಏಳು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿತು.

ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು.

ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ವೇಗಿಗಳಾದ ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಪಾಕಿಸ್ತಾನದ ಬ್ಯಾಟಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.

ಪಾಕಿಸ್ತಾನದ ಆರಂಭಿಕ ಆಟಗಾರರಾದ ಶಾಫಿ(20) ಹಾಗೂ ಇಮಾಮ್ ಉಲ್ ಹಕ್ (36) ರನ್ ಗಳಿಸುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು ಆದರೆ ಅವರಿಬ್ಬರನ್ನು ಬುಮ್ರಾ ಹಾಗೂ ಸಿರಾಜ್ ಪೆವಿಲಿಯನ್ ಗೆ ಕಳುಹಿಸಲು ಯಶಸ್ವಿಯಾದರು.

ನಂತರ ಒಂದಾದ ನಾಯಕ ಬಾಬರ್ ಅಜಾಮ್ (50) ರನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (49) ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು, ಆದರೆ ಸಿರಾಜ್ ಬೌಲಿಂಗ್ ಅರಿಯಲು ವಿಫಲವಾದ ಬಾಬರ್ ಅರ್ಧಶತಕ ಗಳಿಸಿ ಕ್ಲೀನ್ ಬೌಲ್ಡ್ ಆದರು.

ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಆಟಗಾರರಾದ ಶಕೀಲ್ (6), ಅಹಮದ್ (4), ಶಾಬದ್ ಖಾನ್ (2), ಮಹಮದ್ ನವಾಜ್ (4) ವಿಫಲರಾದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿರಾಜ್, ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

191 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಆರು ಬೌಂಡರಿ ಹಾಗೂ ಆರು ಸಿಕ್ಸರ್ ನೆರವಿನಿಂದ (86) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (53) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ವಿರಾಟ್ ಕೊಹ್ಲಿ (16), ಶುಭ್ಮನ್ ಗಿಲ್ (16) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ (19) ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು, ಪಾಕಿಸ್ತಾನದ ಪರವಾಗಿ ಶಾಹೀನ್ ಅಫ್ರಿದಿ ಎರಡು ವಿಕೆಟ್ ಹಾಗೂ ಹಸನ್ ಅಲಿ ಒಂದು ವಿಕೆಟ್ ಪಡೆದರು, ಉತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಜಸ್ಪ್ರಿತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

2 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

5 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

8 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

9 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

11 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

11 hours ago