ವಿಶ್ವಕಪ್: ರನ್ ಹೊಳೆ ಹರಿಸಿದ ಶ್ರೇಯಸ್ – ರಾಹುಲ್, ಡಚ್ಚರಿಗೆ ಡಿಚ್ಚಿ ಹೊಡೆದ ಭಾರತ !

ದೀಪಾವಳಿ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದ ಬೆಂಗಳೂರಿಗರಿಗೆ ಭಾರತದ ಕ್ರಿಕೆಟ್ ತಂಡ ನೆದರ್ಲೆಂಡ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ 160 ರನ್ ಗಳ ಜಯಭೇರಿ ಬಾರಿಸಿ ಸಂಭ್ರಮವನ್ನು ದುಪ್ಪಟ್ಟು ಗೊಳಿಸಿದರು.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಉತ್ತಮ ಲಯದಲ್ಲಿದ್ದ ನಾಯಕ ರೋಹಿತ್ ಶರ್ಮಾ (61) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (51) ರನ್ ಗಳಿಸಿ ಶತಕದ ಜೊತೆಯಾಟ ನಡೆಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (51) ರನ್ ಗಳಿಸಿದರೆ, ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ 10 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ (128*) ಹಾಗೂ ಕನ್ನಡಿಗ, ವಿಕೆಟ್ ಕೀಪರ್ ಕೆ.ಎಲ್ . ರಾಹುಲ್ 11 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ (102) ರನ್ ಗಳಿಸಿ ವಿಶ್ವಕಪ್ ನಲ್ಲಿ ಅತಿವೇಗದ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದರು ಹಾಗೂ ತಂಡದ ಮೊತ್ತವನ್ನು 410 ರ ಗಡಿ ದಾಟಿಸಿದರು .

ನೆದರ್ಲೆಂಡ್ ಪರವಾಗಿ ಲ್ಯಾಡ್ ಎರಡು ವಿಕೆಟ್, ಮಿಕೆರೆನ್ ಹಾಗೂ ಮಿರ್ವೆ ತಲಾ ಒಂದು ವಿಕೆಟ್ ಪಡೆದರೆ ವ್ಯಾನ್ ಬೇಕ್ 107 ರನ್ ನೀಡಿ ಒಂದೂ ವಿಕೆಟ್ ಪಡೆಯದೆ ದುಬಾರಿಯಾದರು.

ಬೃಹತ್ ಮೊತ್ತ ಬೆನ್ನತ್ತಿದ್ದ ಡಚ್ಚರಿಗೆ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಆಘಾತ ನೀಡಿದರು, ಆರಂಭಿಕ ಆಟಗಾರ ಬೆರ್ಸಿ(4) ರನ್ ಗಳಿಸಿ ಔಟಾದರು, ಅನುಭವಿ ಆಟಗಾರ ಮ್ಯಾಕ್ಸ್ ಓಡೌಡ್ (30), ಆಕ್ರಮನ್ (35), ಸೈಬ್ರಾಡ್ (45) ಹಾಗೂ ತೇಜ್ ನಿಡುಮಾನುರು (54) ರನ್ ಗಳಿಸಿದರೂ ಸಹ ಗುರಿ ತಲುಪಲಾಗದೆ 250 ರನ್ ಗಳಿಸಿ ಆಲೌಟ್ ಆದರು.

ಈ ಮೂಲಕ ಭಾರತ 160 ರನ್ ಜಯ ಸಾಧಿಸಿತು, ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ , ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ ಹಾಗೂ ಕುಲದೀಪ್ ಯಾದವ್ ತಲಾ ಎರಡು ವಿಕೆಟ್ ಕಬಳಿಸಿದರೆ ಬ್ಯಾಟ್ಸ್ಮನಗಳಾದ ನಾಯಕ ರೋಹಿತ್ ಶರ್ಮಾ ಹಾಗೂ ಹಿರಿಯ ಆಟಗಾರ ವಿರಾಟ್ ಕೋಹ್ಲಿ ತಲಾ ಒಂದು ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಭಾರತ 9 ಬೌಲರ್ ಗಳು ಬೌಲಿಂಗ್ ಮಾಡಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

12 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

24 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago