ವಿಶ್ವಕರ್ಮ ಯೋಜನೆ ತರಬೇತಿಯಲ್ಲಿ ಕಳ್ಳಾಟ..? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಅಕ್ರಮದ ವಾಸನೆ..? ಮಾಧ್ಯಮದವರಿಗೆ ಸೂಕ್ತ ಮಾಹಿತಿ ಒದಗಿಸದೇ ನುಣಿಚಿಕೊಳ್ಳುವ ಯತ್ನ: ನುರಿತ ತರಬೇತುದಾರರ ಕೊರತೆ..?

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ತರಬೇತಿ ಅಧಿಕಾರಿಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಾದಿ ತಪ್ಪುತ್ತಿದ್ದು, ತರಬೇತಿಗೆಂದು ಜನರನ್ನು ತರಬೇತಿ ಕೇಂದ್ರಕ್ಕೆ ಕರೆಸಿ ಅದು ಸರಿ ಇಲ್ಲ, ಇದು ಸರಿ ಇಲ್ಲ ಎಂದು ದಿನಪೂರ್ತಿ ಅಲ್ಲೇ ಇರಿಸಿಕೊಂಡು ಯಾವ ತರಬೇತಿ ನೀಡದೇ ಮನೆಗೆ ವಾಪಸ್ ಕಳುಹಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಲಕ್ಷಾಂತರ ರೂ. ದುರುಪಯೋಗವಾಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಲಾಗಿನ್ ಲಾಗ್ ಔಟ್ ಗೆ ಸೀಮಿತವಾದ ಬುಟ್ಟಿ ನೇಯ್ಗೆ ತರಬೇತಿ…!

ನಗರದಲ್ಲಿ ಕಳೆದ ಮೂರು ದಿನಗಳಿಂದ ಬುಟ್ಟಿ ನೇಯ್ಗೆ ತರಬೇತಿ ನಡೆಯುತ್ತಿದ್ದು, ಯಾವುದೇ ರೀತಿಯ ತರಬೇತಿ ನೀಡದೇ ಬೆಳಗ್ಗೆ ಸಂಜೆ ಲಾಗಿನ್ ಲಾಗ್ ಔಟ್ ಮಾಡಿಸಿಕೊಂಡು‌ ಮನೆಗೆ ಕಳುಹಿಸಲಾಗುತ್ತಿದೆ ಎಂದು ಹೆಸರನ್ನು ಹೇಳುವುದುಕ್ಕೆ ಇಚ್ಛಿಸದ ತರಬೇತಿ ಪಡೆಯುವವರು ತಿಳಿಸಿದ್ದಾರೆ.

ತರಬೇತಿ ಸ್ಥಳದಲ್ಲಿನ ಸಿಬ್ಬಂದಿಗೆ ತರಬೇತಿ ಕುರಿತು ಪ್ರಶ್ನೆ , ತಾಂತ್ರಿಕ ದೋಷ ಇದೆ. ಆದ್ದರಿಂದ ಹೀಗೆ ಆಗುತ್ತಿದೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.

ಕುಶಲಕರ್ಮಿಗಳಿಗೆ ಬೂಸ್ಟರ್‌ ಡೋಸ್‌ ಆಗಬೇಕಿದ್ದ ಈ ಯೋಜನೆ ಆರಂಭಗೊಂಡು ಬರೋಬ್ಬರಿ ಒಂದು ವರ್ಷ ಕಳೆದರೂ ಯೋಜನೆ ಸರಿಯಾಗಿ ಟೇಕಾಫ್‌ ಆಗದೇ ಹಳ್ಳ ಹಿಡಿದಿದೆ. ಯೋಜನೆಯಡಿ ಗುರುತಿಸಿರುವ 18 ಕೌಶಲ ತರಬೇತಿ ಪೈಕಿ ಕೇವಲ 2ಕ್ಕೆ ಮಾತ್ರ ತರಬೇತಿ ಸಿಗುತ್ತಿದೆ. ಬಹುತೇಕ ಕೌಶಲ ತರಬೇತಿಗಳಿಗೆ ತರಬೇತುದಾರರೇ ಇಲ್ಲದಿರುವುದು ಹಿನ್ನಡೆಗೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ತರಬೇತಿ ಕೇಂದ್ರಗಳಿಗೆ ದಿಢೀರ್ ಭೇಟಿ ನೀ ಪರಿಶೀಲನೆ ನಡೆಸಬೇಕಿದೆ.

ಅಲ್ಲದೆ ತರಬೇತಿ ಕೇಂದ್ರಗಳ ಸಿಸಿ ಕ್ಯಾಮೆರಾಗಳ ದೃಶ್ಯವನ್ನು ವಶಕ್ಕೆ ಪಡೆದು, ನೀಡಲಾದ ತರಬೇತಿ ಏನು.? ಭಾಗಿಯಾದ ಫಲಾನುಭವಿಗಳು ಎಷ್ಟು..? ತರಬೇತುದಾರರು ಯಾರು..? ಎಂಬ ಕುರಿತು ತನಿಖೆ ನಡೆಸಿ, ತರಬೇತಿ ಹೆಸರಲ್ಲಿ ಲಕ್ಷಾಂತರ ರೂ. ಹಣ ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರ ಮೃತ್ಯುಂಜಯ ಹೇಳಿದ್ದಾರೆ.

Ramesh Babu

Journalist

Recent Posts

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

19 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

2 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

7 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago