
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಯುಕ್ತಾಶ್ರಯದಲ್ಲಿ ವಿಶ್ವದಾಖಲೆಯ ರಾಜ್ಯ ಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರ ಹಾಗೂ ನಾನು ವಿಜ್ಞಾನಿ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ತಾಲೂಕಿನ ರೈಲ್ವೆ ನಿಲ್ದಾಣ ಸಮೀಪದ ಅನಿಬೆಸೆಂಟ್ ಪಾರ್ಕ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ವಿಶ್ವದಾಖಲೆಯ ರಾಜ್ಯ ಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರ ಹಾಗೂ ನಾನು ವಿಜ್ಞಾನಿ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟನೆ ಮಾಡಿದರು.
ಈ ವೇಳೆ ಹುಲಿಕಲ್ ನಟರಾಜ್, ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.