Categories: ಕೋಲಾರ

ವಿಶ್ವವಿದ್ಯಾಲಯಗಳ ಅನುದಾನ ಆಯೋಗದ ಪ್ರಸ್ತಾಪವನ್ನು ರದ್ದುಗೊಳಿಸಲು ಎಸ್‌ಎಫ್‌ಐ ಒತ್ತಾಯ

ಕೋಲಾರ: ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳ ಅನುದಾನ ಆಯೋಗ ನಿಯಮಗಳ ಪ್ರಸ್ತಾಪವನ್ನು ಕೂಡಲೇ ರದ್ದು ಪಡಿಸುವಂತೆ ಒತ್ತಾಯಿಸಿ ಭಾರತ ವಿಧ್ಯಾರ್ಥಿ ಫೆಡರೇಶನ್ ( ಎಸ್‌ಎಫ್‌ಐ) ಸಂಘಟನೆಯ ವತಿಯಿಂದ ಸೋಮವಾರ ತಹಶಿಲ್ದಾರ್ ಕಚೇರಿಯ ಉಪ ತಹಶೀಲ್ದಾರ್ ಭಾಸ್ಕರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಶಶಿಕುಮಾರ್ ಮಾತನಾಡಿ, ವಿಶ್ವವಿದ್ಯಾಲಯದ ಅನುದಾನ ಆಯೋಗವು ಕಾಲೇಜುಗಳಲ್ಲಿ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಮತ್ತು ಮುಂಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ನಿಯಮಗಳ ಕರಡನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಬಿಡುಗಡೆ ಮಾಡಿದ್ದು ಈ ಕರಡು ಕ್ಯಾಂಪಸ್‌ಗಳಲ್ಲಿ ಉನ್ನತ ಶಿಕ್ಷಣವನ್ನು ಕೇಂದ್ರೀಕರಣಗೊಳಿಸುವ ಮತ್ತು ಕಾರ್ಪೊರೇಟ್ ಶಿಕ್ಷಣ ವ್ಯವಸ್ಥೆಗೆ ಸಂಪೂರ್ಣವಾಗಿ ಅವಕಾಶ ಮಾಡಿಕೊಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ದೇಶದಲ್ಲಿ ಕೇಂದ್ರ ಸರ್ಕಾರದ ವಿರೋಧ ಪಕ್ಷಗಳು ಆಡಳಿತವಿರುವ ತಮಿಳುನಾಡು, ಕೇರಳದಂತಹ ಹಲವು ರಾಜ್ಯಗಳ ಸರ್ಕಾರಗಳು ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಅನೇಕ ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಂಘರ್ಷ ನಡೆಸುತ್ತಿವೆ ಈಗ ಪರಿಷ್ಕೃತ ನಿಯಮಗಳು ಉಪಕುಲಪತಿಗಳ ಆಯ್ಕೆಯಲ್ಲಿ ರಾಜ್ಯ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರವನ್ನು ಒದಗಿಸುತ್ತವೆ, ಉಪ ಕುಲಪತಿಗಳ ಆಯ್ಕೆಯಲ್ಲಿಯೂ ಸಹ ಕನಿಷ್ಥ ಅರ್ಹತೆಗಳನ್ನು ನಿಗದಿಪಡಿಸಿಲ್ಲ ಉದ್ಯಮ ರಂಗದ ಪರಿಣಿತರು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳಿಗೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಾಗುವ ಅವಕಾಶ ನೀಡಲಾಗಿದೆ. ಮತ್ತು ಉಪ ಕುಲಪತಿಗಳ ಆಯ್ಕೆಯ ಸಮಿತಿಯಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಇದು ದೇಶದ ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿಯಾಗಿದೆ ಎಂದರು.

ಯುಜಿಸಿ ಸಿದ್ದಪಡಿಸಿರುವ ಕರಡುವಿನಲ್ಲಿ ಹಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ. ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಮತ್ತು ತಂತ್ರಜ್ಞಾನ ಸ್ನಾತಕೋತ್ತರ ಪದವಿ ಪಡೆದವರು ಕನಿಷ್ಠ ಶೇ 55 ರಷ್ಟು ಅಂಕಗಳನ್ನು ಗಳಿಸಿದರೆ ವಿಶ್ವವಿದ್ಯಾಲಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರವಾಗಿ ಅರ್ಹತೆ ಪಡೆಯುತ್ತಾರೆ. ಅವರು ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ (ಎನ್ ಇ ಟಿ) ಅರ್ಹತೆ ಪಡೆದುಕೊಳ್ಳುವ ಅಗತ್ಯ ಇಲ್ಲ ಇದು ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣದ ನೀಡುವುದರ ಮೇಲೆ ಪರಿಣಾಮ ಬೀಳುತ್ತದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಉಪಾಧ್ಯಕ್ಷೆ ಹರ್ಷಿತ ಮಾತನಾಡಿದ ಈ ನಿಯಮಗಳಿಂದ ಬೋಧನೆ ಮತ್ತು ಸಂಶೋಧನೆಯ ಮೇಲೆ ನೇರವಾದ ಪ್ರಭಾವವನ್ನು ಹೊಂದಿರದ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಸರ್ಕಾರವು ಸಂಶೋಧನೆಯಿಂದ ತನ್ನದೇ ಆದ ಜವಾಬ್ದಾರಿಯನ್ನು ಹಿಂತೆಗೆದುಕೊಳ್ಳುತ್ತಿದೆ ಮತ್ತು ವೆಂಚರ್ ಫಂಡ್‌ಗಳ ಹೆಸರಿನಲ್ಲಿ ವಿವಿಧ ಖಾಸಗಿ ಉದ್ಯಮಿಗಳಿಗೆ ದಾರಿ ಮಾಡಿಕೊಡುತ್ತಿದೆ.ಇದು ಇಡೀ ಶಿಕ್ಷಣ ವ್ಯವಸ್ಥೆಯನ್ನು ಮಾರುಕಟ್ಟೆ ಆಧಾರಿತ ಸಂಶೋಧನೆಯತ್ತ ಕೊಂಡೊಯ್ಯುತ್ತದೆ.ವೆಂಚರ್ ಫಂಡ್‌ಗಳ ಬಗ್ಗೆ ಯಾವುದೇ ಸ್ಪಷ್ಟತೆಯನ್ನು ನಿಡಲಾಗಿಲ್ಲ ಇದು ಕೇಸರಿಕರಣದ ಕಡೆಗೆ ಕಾರಣವಾಗಬಹುದು ಮತ್ತು ಈ ಕರಡು ವರದಿಯಲ್ಲಿ ಬೋಧಕ ಹುದ್ದೆಗಳ ಮೀಸಲಾತಿಯ ಬಗ್ಗೆಯೂ ಮೌನ ವಹಿಸಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್, ಲೋಕೇಶ್, ಅನುಶ್ರೀ, ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

55 minutes ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

5 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

22 hours ago