ವಿಶ್ವೇಶ್ವರಪುರ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ

ಬೆಂಗಳೂರು: ವಿಶ್ವೇಶ್ವರಪುರ ಕಾನೂನು ಮಹಾವಿದ್ಯಾಲಯ ಹಾಗೂ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA) ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಗಣಪತಿ ಪ್ರಶಾಂತ್ ಎಂ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುಧಾ ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ರಾಷ್ಟ್ರೀಯ ಕಾನೂನು ಸೇವೆಗಳ ದಿನದ ಅಂಗವಾಗಿ ಕಾನೂನು ಸೇವೆಗಳ ಪ್ರಾಧಿಕಾರದ ಉದ್ದೇಶ, ಸಾರ್ವಜನಿಕರಿಗೆ ಉಚಿತ ಕಾನೂನು ನೆರವು ಒದಗಿಸುವ ವ್ಯವಸ್ಥೆ ಹಾಗೂ ನ್ಯಾಯವನ್ನು ಎಲ್ಲರಿಗೂ ತಲುಪಿಸುವ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ವಹಿಸುತ್ತಿರುವ ಪಾತ್ರದ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!