ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ನವ ಇತಿಹಾಸ ಸೃಷ್ಟಿ ಮಾಡಿದ್ದಾರೆ.
ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ 88.17 ಮೀಟರ್ ಭರ್ಜಿ ಎಸೆಯುವುದರೊಂದಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಬಂಗಾರ ಪದಕ ಪಡೆದ ಮೊದಲ ಭಾರತೀಯ ಎಂಗ ಹೆಗ್ಗಳಿಕೆಗೆ ಪಾತ್ರರಾದರು.
ಮೊದಲ ಸುತ್ತಿನಲ್ಲೇ ಫೌಲ್ ಮಾಡಿದ್ದ ನೀರಜ್ ಚೋಪ್ರಾ, 2ನೇ ಸುತ್ತಿನಲ್ಲಿ 88.17 ಮೀಟರ್ ದೂರಕ್ಕೆ ಎಸೆಯುವ ಮೂಲಕ ಅಗ್ರಸ್ಥಾನಕ್ಕೇರಿ ಬಂಗಾರದ ಪದಕ ಪಡೆದರು.