ವಿಶ್ವಕಪ್ ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ಆರಂಭಿಕ ಹಿನ್ನಡೆಯ ನಡುವೆಯೂ ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ರೋಚಕ ಗೆಲುವು ಸಾಧಿಸಿತು.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡರು, ಆದರೆ ಭಾರತ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಆರಂಭಿಕ ಆಟಗಾರನಾದ ಮಿಚೆಲ್ ಮಾಷ್೯ ಅವರ ವಿಕೆಟ್ ಪಡೆದರು.
ನಂತರ ಒಂದಾದ ಡೇವಿಡ್ ವಾರ್ನರ್ (41) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಸ್ಟೀವನ್ ಸ್ಮಿತ್ (46) ಉತ್ತಮ ಜೊತೆಯಾಟ ನಡೆಸಿ ತಂಡವನ್ನು 74 ರ ಗಡಿ ದಾಟಿಸಿದರು, ಲಬುಶನಗೆ (27) ಹಾಗೂ ಬೌಲರ್ ಮಿಚೆಲ್ ಸ್ಟ್ರಾಕ್ (28) ಉತ್ತಮ ರನ್ ಗಳಿಸುವ ಮೂಲಕ ಭಾರತಕ್ಕೆ 200 ರನ್ ಗುರಿ ನೀಡಿದರು.
ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ ಮೂರು ವಿಕೆಟ್, ಸ್ಪಿನ್ನರ್ ಕುಲದೀಪ್ ಯಾದವ್ ಹಾಗೂ ವೇಗಿ ಜಸ್ಪ್ರಿತ್ ಬುಮ್ರಾ ಎರಡು ವಿಕೆಟ್, ಸಿರಾಜ್, ಆರ್. ಅಶ್ವಿನ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.
200 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (0), ಇಶಾನ್ ಕಿಶನ್ (೦) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (೦) ಸೊನ್ನೆ ಸುತ್ತಿದರು ಒಂದು ಹಂತದಲ್ಲಿ ಎರಡು ರನ್ ಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.
ವಿಕೆಟ್ ಪಡೆದ ಖುಷಿಯಿಂದ ಬೀಗುತ್ತಿದ್ದ ಆಸ್ಟ್ರೇಲಿಯಾ ತಂಡದ ಖುಷಿ ಹೆಚ್ಚು ಹೊತ್ತು ಇರಲಿಲ್ಲ, ಮುರಿಯದ ನಾಲ್ಕನೇ ವಿಕೆಟ್ ಗೆ ವಿರಾಟ್ ಕೊಹ್ಲಿ ಆರು ಬೌಂಡರಿ ನೆರವಿನಿಂದ (85) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಎಂಟು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 97 ರನ್ ಗಳಿಸುವ ಮೂಲಕ 165 ರನ್ ಗಳ ಜೊತೆಯಾಟ ನಡೆಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ಕೊನೆಗೂ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವಲ್ಲಿ ಆಸೀಸ್ ಸಫಲರಾದರೂ ಸಹ ನಂತರ ಬಂದ ಉಪ ನಾಯಕ ಹಾರ್ದಿಕ್ ಪಾಂಡ್ಯ ಜೊತೆಗೂಡಿದ ರಾಹುಲ್ ಗೆಲುವಿನ ಸಿಕ್ಸರ್ ಸಿಡಿಸಿ ಜಯ ತಂದುಕೊಡುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.