ವಿಶ್ವ ಪರಿಸರ ದಿನಾಚರಣೆ: ಪೊಲೀಸ್ ಠಾಣೆಗಳಲ್ಲಿ ಪರಿಸರ ದಿನಾಚರಣೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಭಾಗಿ

ಇಂದು ನಾಡಿನಾದ್ಯಂತ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ ಸರ್ಕಾರಿ ಕಚೇರಿಗಳಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆಬಾಬಾ ಅವರು ಸಸಿ ನೆಡುವ ಮೂಲಕ‌ ಪರಿಸರ ದಿನಾಚರಣೆ ಆಚರಣೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಠಾಣೆಗಳಲ್ಲಿ 50 ಗಿಡಗಳ ನೆಟ್ಟು ವಿಭಿನ್ನ ರೀತಿಯಲ್ಲಿ ಪರಿಸರ ದಿನ ಆಚರಣೆ ಮಾಡಲಾಯಿತು.

ಮಾವು, ಹಲಸು, ಸೇರಿದಂತೆ ಹಣ್ಣು, ಹೂ ಬಿಡುವ ಗಿಡಗಳನ್ನು ನೆಟ್ಟ ಪರಿಸರ ಅಭಿವೃದ್ಧಿಗೆ ಒತ್ತು‌ ನೀಡಲಾಯಿತು.

ಅದೇರೀತಿ ನವೀಕೃತಗೊಂಡ ಮಹಿಳಾ ಪೊಲೀಸ್ ಠಾಣೆ ಕಟ್ಟಡವನ್ನು ಸಹ ಉದ್ಘಾಟನೆ ಮಾಡಿದರು.

ಈ ವೇಳೆ ಎಎಸ್ಪಿ ಡಾ.ವೆಂಕಟೇಶ್ ಪ್ರಸನ್ನ, ಡಿವೈಎಸ್ ಪಿ ರವಿ.ಪಿ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ಪೌರಾಯುಕ್ತ ಕಾರ್ತೀಕೇಶ್ವರ್,‌ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ, ಮಹಿಳಾ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ, ಪೊಲೀಸ್ ಅಧಿಕಾರಿಗಳು,‌ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!