ಕರ್ನಾಟಕ ರಾಜ್ಯದ ಹೊಯ್ಸಳರ ಕಾಲದ ಮೂರು ಪ್ರಮುಖ ದೇವಾಲಯಗಳಾದ ಮೈಸೂರು ಜಿಲ್ಲೆಯ ಸೋಮನಾಥಪುರಲ್ಲಿರುವ ಕೇಶವ ದೇವಸ್ಥಾನ, ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.
ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರುನಾಡಿನ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದು ಖುಷಿಯ ಜೊತೆಗೆ ಹೆಮ್ಮೆಯ ಸಂಗತಿ ಕೂಡ. ನಾಡಿನ ಪ್ರವಾಸಿ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ವಿಶ್ವಮಟ್ಟದ ಮೂಲಸೌಲಭ್ಯ ಮತ್ತು ಸುರಕ್ಷತೆ ಒದಗಿಸಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.