ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಯಿತು.
ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಡೆಯುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಕುಮಾರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪ್ರತಿಯೊಬ್ಬರು ತಮ್ಮ ಮನೆ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿ, ನೈರ್ಮಲ್ಯದಿಂದ ಕಾಪಾಡಬೇಕು. ನೈರ್ಮಲ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರೂ ಬಯಲು ಶೌಚ ಮಾಡುವುದನ್ನು ಬಿಟ್ಟು ಮನೆ ಶೌಚಾಲಯಗಳನ್ನು ಬಳಸುವ ಜತೆಗೆ ಸುತ್ತ ಮುತ್ತಲಿನ ಪ್ರತಿಯೊಬ್ಬ ಜನರು ಶೌಚಾಲಯ ಬಳಸುವಂತೆ ಪ್ರೇರಣೆ ತುಂಬಬೇಕು. ಪ್ರತಿಯೊಬ್ಬರೂ ಸಾರ್ವಜನಿಕ ಶೌಚಾಲಯಗಳನ್ನು ನಮ್ಮ ಮನೆ ಶೌಚಾಲಯಗಳಂತೆ ಬಳಸಿಕೊಂಡ ಬಯಲು ಶೌಚ್ಛ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.
ಈ ವೇಳೆ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆಯ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ನಾಗೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲಕುಮಾರ, ಕುಂದಾಣ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…