ವಿಷಜಂತು‌ ಕಚ್ಚಿ ಬಾಲಕ ಸಾವು: ಶಾಲಾ ಆವರಣದಲ್ಲಿ ಮೃತದೇಹವಿಟ್ಟು ಪ್ರತಿಭಟನೆ: ಸ್ಥಳಕ್ಕೆ ಬಾರದು ಶಾಲಾ ಆಡಳಿತ ಮಂಡಳಿ ಸದಸ್ಯರು:ತಾರಕಕ್ಕೇರಿದ ಗ್ರಾಮಸ್ಥರ ಆಕ್ರೋಶ: ಸೂಕ್ತ ನ್ಯಾಯ ಸಿಗುವವರಿಗೂ ಶವ ಸ್ಥಳಾಂತರಿಸುವುದಿಲ್ಲ ಎಂದು ಪಟ್ಟು

ತಾಲೂಕಿನ ಪುರಷನಹಳ್ಳಿಯಲ್ಲಿರುವ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆ ಸಮೀಪವಿರುವ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿ ಹತ್ತನೇ ತರಗತಿ ವಿದ್ಯಾರ್ಥಿ ದೇವರಾಜ್(15) ಮೃತಪಟ್ಟ ಘಟನೆ ನಡೆದಿದೆ.

ಬಾಲಕನ ಸಾವಿಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಬಾಲಕನ ಪೋಷಕರು, ಪುರುಷನಹಳ್ಳಿ ಹಾಗೂ ಸುತ್ತಮುತ್ತ ಗ್ರಾಮಸ್ಥರು ಶಾಲಾ ಆವರಣದಲ್ಲೇ ಬಾಲಕನ ಶವ ಇರಿಸಿ ಪ್ರತಿಭಟನೆ ನಡೆಸಿದರು.

ಇತ್ತ ಸುಮಾರು 4 ಗಂಟೆಗೂ ಹೆಚ್ಚೂ ಕಾಲ ಶವ ಇರಿಸಿ ಪ್ರತಿಭಟನೆ ನಡೆಸಿದರೂ ಆಡಳಿತ ಮಂಡಳಿಯ ಯಾರೊಬ್ಬರೂ ಕ್ಯಾರೆ ಎನ್ನದಿರುವುದು ಪ್ರತಿಭಟನೆಕಾರರ ಕಿಚ್ಚು ಹೆಚ್ಚಿಸಿತು.

ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಲು ಮುಂದಾದರು. ಇದಕ್ಕೆ‌ ಸೊಪ್ಪು ಹಾಕದ ಪ್ರತಿಭಟನಾಕಾರರು ಆಡಳಿತ ಮಂಡಳಿಯವರು ಸ್ಥಳಕ್ಕೆ ಬರಲೇ ಬೇಕು. ಅಲ್ಲಿಯವರೆಗೆ ಶವ ಸ್ಥಳಾಂತರಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಮಠದ ವತಿಯಿಂದ 2‌ಲಕ್ಷ ಹಿಡುಗಂಟು ನೀಡುವ ಭರವಸೆ ನೀಡಿದ್ದಾರೆ ಎಂದು ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಕುಮಾರ್ ಅವರು ಪ್ರತಿಭಟನಾಕಾರರಿಗೆ ತಿಳಿಸಿದರು. ಆಗ ಮತ್ತಷ್ಟು ಕುಪಿತರಾದ ಜನರು, ಹಿಗ್ಗಾ‌ಮುಗ್ಗಾ ವಾಗ್ದಾಳಿ ನಡೆಸಿದರು. ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಮೃತ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ನಿರ್ಲಕ್ಷ್ಯ ತೋರಿದ ಶಾಲೆಯ ಸಿಬ್ಬಂದಿ ವಿರುದ್ಧ ಕಠಿಣ ಜರುಗಿಸಬೇಕು, ಶಾಲಾ ವಿದ್ಯಾರ್ಥಿಗಳಿಂದ ಕೆಲಸ ಮಾಡಿಸುವ ಪ್ರವೃತ್ತಿಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಘಟನೆ ಹಿನ್ನೆಲೆ

ಆ.27(ಮಂಗಳವಾರ)ರಂದು ಎಂದಿನಂತೆ ಬೆಳಗ್ಗೆ 9ಗಂಟೆಗೆ ಸಮವಸ್ತ್ರ ಧರಿಸಿ ಶಾಲೆಗೆ ಬಂದಿದ್ದ, ಶಾಲೆಗೆ ಬಂದ‌ ಕೂಡಲೇ ಶಾಲೆಯ ಹಿಂಭಾಗದಲ್ಲಿರುವ ತೆಂಗಿನ ತೋಟದಲ್ಲಿ ತೆಂಗಿನಕಾಯಿ ತರಲು ಹೋದಾಗ ವಿಷಜಂತು ಕಚ್ಚಿದೆ. ಕೂಡಲೇ ಈ ವಿಚಾರವನ್ನು ಬೆಳಗ್ಗೆ 9:30ಕ್ಕೆ ಫೋನ್ ಕರೆ ಮೂಲಕ ಪೋಷಕರಿಗೆ ತಿಳಿಸಲಾಗಿದೆ.

ಕೂಡಲೇ ಪೋಷಕರು ಅಸ್ವಸ್ತಗೊಂಡಿದ್ದ ಬಾಲಕನನ್ನು ನಾಟಿ ಔಷಧಿಯನ್ನು ಕೊಡಿಸಿದ್ದಾರೆ. ನಾಟಿ ಔಷಧಿಯ ಚಿಕಿತ್ಸೆ ಯಿಂದ ಯಾವುದೇ ಪ್ರಯೋಜನ ಆಗದ ಹಿನ್ನೆಲೆ ಇಂದು ಮುಂಜಾನೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಬಾಲಕನಿಗೆ ವಿಷಜಂತು  ಕಚ್ಚಿರುವುದಾಗಿ ತಿಳಿದುಬಂದಿದೆ.

ಮೃತ ಬಾಲಕನ ಸ್ವಂತ ಊರು ರಾಮನಗರ ಜಿಲ್ಲೆಯ ಮಾಗಡಿ‌ ತಾಲೂಕಿನ ಸೋಲೂರು ಗ್ರಾಮದವನು. ತಾಲೂಕಿನ ಐಯ್ಯನಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ ಮಾಡಿಕೊಂಡು ಪುರಷನಹಳ್ಳಿಯ ಶ್ರೀ ಸಿದ್ಧಗಂಗಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ಇದೀಗ ಮಗನನ್ನು ಕಳೆದುಕೊಂಡ ತಂದೆ ತಾಯಿಯ ರೋಧನೆ ಮುಗಿಲು ಮುಟ್ಟಿದೆ.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

5 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago