ಸುಮಾರು 19 ವರ್ಷದ ಯುವಕನೋರ್ವ ಮಾನಸಿಕವಾಗಿ ಮನನೊಂದು ಸುಮಾರು 11ಗಂಟೆ ರಾತ್ರಿಯಲ್ಲಿ ವಿಷ ಕುಡಿದು ತೀವ್ರವಾಗಿ ಅಸ್ವಸ್ಥಗೊಂಡು ಒದ್ದಾಡುತ್ತಿದ್ದನು. ಆಗ ಈ ಯುವಕನೇ ತನ್ನ ಫೋನ್ ನಿಂದ 112ಗೆ ಕರೆ ಮಾಡಿ ತಡವರಿಸುತ್ತಾ ತಾನು ವಿಷ ಕುಡಿದಿರುವ ಬಗ್ಗೆ ದೂರು ನೀಡುತ್ತಾನೆ.
ಕರೆ ಬಂದ ಕೆಲವೇ ಕ್ಷಣಗಳಲ್ಲಿ 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಆ ಯುವಕನನ್ನು ಕತ್ತಲಲ್ಲೇ ಹುಡುಕಾಡಿದ್ದಾರೆ. ಆ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ತೋಟವೊಂದರಲ್ಲಿ ಕೆಳಗೆ ಬಿದ್ದು ನರಳಾಡುತ್ತಿದ್ದನು. ಆತನ ಫೋನ್ ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಮೊಬೈಲ್ ಗಳಲ್ಲಿ ಟಾರ್ಚ್ ಹಾಕಿಕೊಂಡು ಪೊಲೀಸರು ಹುಡುಕಾಡಿದ್ದಾರೆ. ಕೊನೆಗೆ ನರಳಾಡುತ್ತಿದ್ದ ಯುವಕನನ್ನು ಪತ್ತೆ ಮಾಡಿ ಸ್ಥಳೀಯ ಆಸ್ಪತ್ರೆಗೆ ತಮ್ಮ 112 ವಾಹನದಲ್ಲೇ ರವಾನಿಸಿದ್ದಾರೆ.
ಸದ್ಯ ವಿಷ ಕುಡಿದ ಯುವಕ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾನೆ. ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವವನ್ನು ಸಕಾಲಕ್ಕೆ ಬಂದ 112 ಪೊಲೀಸರು, ಆತನ ಜೀವ ಉಳಿಸಿದ್ದಾರೆ. 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಅವರ ಈ ಕಾರ್ಯಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಜೊತೆಗೆ ಯುವಕನ ಸಂಬಂಧಿಕರು ಕೂಡ ಮುನಿರಾಜು ಎಂ ಹಾಗೂ ಕಾಂತರಾಜುರವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ….
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…