ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ  ಯುವಕನ ಜೀವ ಉಳಿಸಿದ 112 ಪೊಲೀಸರು: ಪೊಲೀಸರ ಕಾರ್ಯಯಕ್ಕೆ ಸಾರ್ವಜನಿಕರಿಂದ‌ ಭಾರೀ ಮೆಚ್ಚುಗೆ

ಸುಮಾರು 19 ವರ್ಷದ ಯುವಕನೋರ್ವ ಮಾನಸಿಕವಾಗಿ ಮನನೊಂದು ಸುಮಾರು 11ಗಂಟೆ ರಾತ್ರಿಯಲ್ಲಿ ವಿಷ ಕುಡಿದು ತೀವ್ರವಾಗಿ ಅಸ್ವಸ್ಥಗೊಂಡು ಒದ್ದಾಡುತ್ತಿದ್ದನು. ಆಗ ಈ ಯುವಕನೇ ತನ್ನ ಫೋನ್ ನಿಂದ 112ಗೆ ಕರೆ ಮಾಡಿ ತಡವರಿಸುತ್ತಾ ತಾನು ವಿಷ ಕುಡಿದಿರುವ ಬಗ್ಗೆ ದೂರು ನೀಡುತ್ತಾನೆ.

ಕರೆ ಬಂದ‌ ಕೆಲವೇ ಕ್ಷಣಗಳಲ್ಲಿ 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳದಲ್ಲಿ ಆ ಯುವಕನನ್ನು ಕತ್ತಲಲ್ಲೇ ಹುಡುಕಾಡಿದ್ದಾರೆ. ಆ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ತೋಟವೊಂದರಲ್ಲಿ ಕೆಳಗೆ ಬಿದ್ದು ನರಳಾಡುತ್ತಿದ್ದನು. ಆತನ ಫೋನ್ ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಮೊಬೈಲ್ ಗಳಲ್ಲಿ ಟಾರ್ಚ್ ಹಾಕಿಕೊಂಡು ಪೊಲೀಸರು ಹುಡುಕಾಡಿದ್ದಾರೆ. ಕೊನೆಗೆ ನರಳಾಡುತ್ತಿದ್ದ ಯುವಕನನ್ನು ಪತ್ತೆ ಮಾಡಿ ಸ್ಥಳೀಯ ಆಸ್ಪತ್ರೆಗೆ ತಮ್ಮ 112 ವಾಹನದಲ್ಲೇ ರವಾನಿಸಿದ್ದಾರೆ.

ಸದ್ಯ ವಿಷ ಕುಡಿದ ಯುವಕ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾನೆ. ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವವನ್ನು ಸಕಾಲಕ್ಕೆ ಬಂದ  112 ಪೊಲೀಸರು, ಆತನ ಜೀವ ಉಳಿಸಿದ್ದಾರೆ. 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಅವರ ಈ ಕಾರ್ಯಯಕ್ಕೆ ಸಾರ್ವಜನಿಕರಿಂದ‌ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಜೊತೆಗೆ ಯುವಕನ ಸಂಬಂಧಿಕರು ಕೂಡ ಮುನಿರಾಜು ಎಂ ಹಾಗೂ ಕಾಂತರಾಜುರವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ….

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

11 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

14 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

17 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

19 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

20 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago