ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಸಿಎಂ ಸತೀಶನ್ ಸೇರಿದಂತೆ 20 ಮಂದಿ ಸಚಿವರಿಗೆ ಪ್ರಮಾಣವಚನ ಬೋಧಿಸಿದರು..

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ರೇವಂತ್ ರೆಡ್ಡಿ, ಕೆಸಿ.ವೇಣುಗೋಪಾಲ್, ರಾಜೀವ್ ಚಂದ್ರಶೇಖರ್, ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

ಸತೀಶನ್ ಜೊತೆಗೆ 20 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಾಂಗ್ರೆಸ್​ನಿಂದ 11 ಮಂದಿ, ಮುಸ್ಲಿಂ ಲೀಗ್​ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ ವಾದಿ ಪಕ್ಷ) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೊಸ ಸರ್ಕಾರ ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಿದೆ ಎಂದು ನೂತನ ಮುಖ್ಯಮಂತ್ರಿ ಸತೀಶನ್ ತಿಳಿಸಿದ್ದಾರೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

9 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

14 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

16 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

19 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago