ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರಹನುಮಯ್ಯ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ ಮಾರಸಂದ್ರ ಪಿಕೆಬಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಸ್ತುಬದ್ದ ಜೀವನ ಶೈಲಿ ವಿದ್ಯಾರ್ಥಿಗಳಿಗೆ ಬಹುಮುಖ್ಯ. ದುರಾಭ್ಯಾಸಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತವೆ. ವಿದ್ಯಾರ್ಥಿಗಳು ಪಠ್ಯ ವಿಷಯಗಳಿಗೆ ಮಾತ್ರ ಸೀಮಿತ ಆಗಬಾರದು. ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮ ಆಸಕ್ತಿಯನ್ನು ಹೊಂದಬೇಕು. ಗ್ತಾಮೀಣ ಪ್ರದೇಶದ ಸಮಕಾಲೀನ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿಸ್ಥಿತಿಯನ್ನು ಅರಿಯಲು ವಿಶೇಷ ಶಿಬಿರಗಳಿಂದ ಅನುಕೂಲವಾಗುತ್ತದೆ ಎಂದರು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಸಾದಿಕ್ ಪಾಷ ಮಾತನಾಡಿ, ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛತೆಯಲ್ಲಿ ಇರುವಂತೆ ಮಾಡುವುದು ಎಲ್ಲಾ ನಾಗರಿಕರ ಜವಾಬ್ದಾರಿ. ಶುಚಿತ್ವದಿಂದ ಆರೋಗ್ಯ ವೃದ್ದಿಸುತ್ತದೆ. ಸ್ವಚ್ಛತೆಯ ಮಹತ್ವ ಕುರಿತು ಜನಜಾಗೃತಿ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕಾಗಿದೆ. ವಿಶೇಷ ಸೇವಾ ಶಿಬಿಗಳಲ್ಲಿ ಭಾಗವಹಿಸಿದ್ದ. ಹಲವಾರು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಜೀವನ ಶೈಲಿ ಬದಲಿಸಿಕೊಂಡಿದ್ದಾರೆ ಎಂದರು.
ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೇವತಿ ಮಾತನಾಡಿ, ವಿದ್ಯಾರ್ಥಿ ಜೀವನದ ಹಂತದಲ್ಲಿಯೇ ಯುವಜನತೆಯು ವಿದ್ಯೆ, ಜ್ಞಾನ ಮತ್ತು ಕೌಶಲ್ಯದ ಮಹತ್ವವನ್ನು ಸಕಾಲದಲ್ಲಿ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸುತ್ತಲಿನ ಸಮಾಜದ ಒಳಿತಿಗಾಗಿ ಬದುಕನ್ನು ಸಾರ್ಥಕಗೊಳಿಸಬೇಕು. ಮಹಾತ್ಮ ಗಾಂಧೀಜಿಯವರ ತತ್ತ್ವ ಮತ್ತು ಆದರ್ಶ ಚಿಂತನೆಗಳ ಆಶಯದಂತೆ ರಾಷ್ಟ್ರೀಯ ಸೇವಾ ಯೋಜನೆ ಅಸ್ತಿತ್ವಕ್ಕೆ ಬಂದಿದೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗುತ್ತದೆ ಎಂದರು.
ಸಮಾರಂಭದಲ್ಲಿ ಆಡಳಿತಾಧಿಕಾರಿ ಟಿ.ಎಂ.ಕರಗಯ್ಯ, ಪಿಕೆಬಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಆನಂದ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎ.ಆರ್.ಗಂಗಾಧರೇಶ್ವರ, ಶಿಬಿರಾಧಿಕಾರಿ ಕೆ.ಆರ್.ಪ್ರಸನ್ನಕುಮಾರ್, ಮಜರಾ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ, ಉಪಾಧ್ಯಕ್ಷೆ ಮೀನಾ, ಸದಸ್ಯರುಗಳಾದ ವಿಮಲಪಿಳ್ಳಾಂಜಪ್ಪ, ವಿ.ಎಂ.ವಿಜಯಕುಮಾರ್, ಲೀಲಮ್ಮ ಪಿಳ್ಳೇಗೌಡ, ವಿ.ಎಂ.ಶಿವಕುಮಾರ್, ವೀರಾಪುರ ಗ್ರಾಮದ ಮುಖಂಡರುಗಳಾದ ಪಿ.ಮುನಿಯಪ್ಪ, ಲಕ್ಷ್ಮೀನಾರಾಯಣ್, ಪಿಳ್ಳೇಗೌಡ, ಬಸವರಾಜು, ಹನುಮಂತಪ್ಪ, ಮುನೇಗೌಡ, ಗಂಗಸಿದ್ದಪ್ಪ, ಸತ್ಯನಾರಾಯಣ್, ಪಿಕೆಬಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಬೋಧಕೇತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…