
ದೊಡ್ಡಬಳ್ಳಾಪುರ: ನಗರದ ವೀರಾಪುರ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್ಮೆಂಟ್ ಎದುರಿನ ನಿರ್ಜನ ಪ್ರದೇಶದಲ್ಲಿನ ರಾಜಕಾಲುವೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿ ಸೈಕಲ್ ಟ್ಯೂಬ್ ಬಳಸಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸುಮಾರು ಮೂರರಿಂದ ನಾಲ್ಕು ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸದ್ಯ ಮೃತ ವ್ಯಕ್ತಿಯ ವಯಸ್ಸು, ಹೆಸರು ಹಾಗೂ ವಿಳಾಸದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಮುಂದಾಗಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.