ವೀರ ಯೋಧರ ಸಾಹಸಗಾಥೆ ಯುವಜನರಿಗೆ ಆದರ್ಶವಾಗಬೇಕು- ಡಾ.ಎಂ.ಶ್ರೀನಿವಾಸ್ ರೆಡ್ಡಿ

ವೀರ ಯೋಧರ ಸಾಹಸಗಾಥೆ ಎಲ್ಲ ಯುವಜನರಿಗೆ ಆದರ್ಶವಾಗಬೇಕು. ನಮ್ಮ ದೇಶದ ಅನನ್ಯತೆ, ಸಾರ್ವಭೌಮತೆಯ ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಬೇಕು ಎಂದು ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ಅಧ್ಯಕ್ಷ ಡಾ.ಎಂ.ಶ್ರೀನಿವಾಸರೆಡ್ಡಿ ಎಂದು ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಬುಧವಾರ ಕಾರ್ಗಿಲ್ ವಿಜಯ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಿಕಟಪೂರ್ವ ಪ್ರಾಂಶುಪಾಲ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ದೇಶದ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಮ್ಮ ವೀರಯೋಧರ ತ್ಯಾಗಜೀವನ ನಮಗೆ ಮಾದರಿಯಾಗಬೇಕು. ಯುವಜನತೆ ದೇಶಭಕ್ತಿಯ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ಯುದ್ದೋನ್ಮಾದ ಇಂದು ಜಗತ್ತನ್ನು ಆವರಿಸಿದೆ. ಮಾನವೀಯ ಪ್ರಜ್ಞೆಗೆ ಮಾರಕವಾಗಿರುವ ಯುದ್ದಸಂಸ್ಕೃತಿ ಜಾಗತಿಕವಾಗಿ ದೂರಾಗಬೇಕು ಎಂದು ಅಭಿಪ್ರಾಯಪಟ್ಟರು.

ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ ಮಾತನಾಡಿ, ನಮ್ಮ ಯೋಧರ ತ್ಯಾಗ ಜೀವನ ನಮಗೆ ಅಮರ ಸಂದೇಶವನ್ನು ನೀಡುತ್ತದೆ. ಎಂತಹುದೇ ಸಂದರ್ಭದಲ್ಲಿ ಎದೆಯುಬ್ಬಿಸಿ ನಿಂತು ತಾಯ್ನೆಲವನ್ನು ರಕ್ಷಿಸುವ ಆ ಅನನ್ಯ ಜೀವಗಳಿಗೆ ನಮನ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.

ಈ ವೇಳೆ ಉಪಪ್ರಾಂಶುಪಾಲ ಪ್ರೊ.ಕೆ.ದಕ್ಷಿಣಾಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಕೆ.ಸಿ.ಲಕ್ಷ್ಮೀಶ, ಪ್ರಾಧ್ಯಾಪಕಿ ಪಿ.ಚೈತ್ರ, ಐಐಕ್ಯೂಎ ಸಂಯೋಜಕಿ ಎನ್.ದಿವ್ಯಾ, ಔದ್ಯೋಗಿಕ ಕೌಶಲ ತರಬೇತುದಾರ ಬಾಬು ಸಾಬಿ, ಡಾ.ತಾವರೆನಾಯ್ಕ್, ಉಷಾಶ್ರೀ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

10 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

15 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

18 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago