ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲೂಕಿನ ಆಲಹಳ್ಳಿ ಬಳಿ ಸೋಮವಾರ ಸಂಜೆ ಸುಮಾರು 6 ಗಂಟೆಗೆ ನಡೆದಿದೆ.
ತಪಾಸಣಾ ಕಾರ್ಯದಲ್ಲಿ ನಿರತರಾಗಿದ್ದ ಗೃಹ ರಕ್ಷಕ ದಳದ ಸಿಬ್ಬಂದಿ ರಾಜೇಶ್ ಅವರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯರ ಪ್ರಕಾರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ರಾಜೇಶ್ ಅವರ ಆರೋಗ್ಯ ವಿಚಾರಿಸಿದರು.
ಡಿಕ್ಕಿ ಹೊಡೆದ ಬಳಿಕ ವೀಲಿಂಗ್ ಪುಂಡ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ, ಬೈಕ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪರಾರಿಯಾಗಿರುವ ಸವಾರನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…