
ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ(114) ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.
ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ನಂತರ ಮಾಗಡಿ ತಾಲೂಕಿನ ಚಿಕ್ಕಯ್ಯ ಎಂಬುವವರನ್ನು ವಿವಾಹವಾದರು.
ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
2023 ರ ಅಕ್ಟೋಬರ್‌ನಲ್ಲಿ ಆಸ್ತಮಾದ ತೀವ್ರ ಉಲ್ಬಣದಿಂದಾಗಿ ಅಕ್ಟೋಬರ್ 3 ರಂದು ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ಸಾಲುಮರದ ತಿಮ್ಮಕ್ಕರನ್ನು ದಾಖಲಾಗಿತ್ತು. ಅಲ್ಲಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ತಮ್ಮ ಜೀವಿತಾವಧಿಯಲ್ಲಿ, ಅವರು ಒಟ್ಟು 8,000 ಕ್ಕೂ ಹೆಚ್ಚು ಮರಗಳನ್ನು ನೆಟ್ಟಿದ್ದಾರೆ, ವಿಶೇಷವಾಗಿ ಸ್ವತಃ ಮಕ್ಕಳನ್ನು ಹೊಂದಲು ಸಾಧ್ಯವಾಗದ ನಂತರ ಅವುಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಂಡಿದ್ದರು.