ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ಸಮುದಾಯದಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಸಾಲ ನೀಡಲು ಅಲ್ಪಸಂಖ್ಯಾತ ಸಮುದಾಯದ ಕ್ರೈಸ್ತರು, ಮುಸಲ್ಮಾನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಅನ್ವಯವಾಗುವಂತೆ ಬ್ಯಾಂಕ್‌ ಸಾಲದ ಬದಲಾಗಿ ಕೆ.ಎಂ.ಡಿ.ಸಿ. ನಿಗಮದ ವತಿಯಿಂದಲೇ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ (ಒಂದು ಲಕ್ಷ ರೂಪಾಯಿಗಳು) ಅದರಲ್ಲಿ ಶೇ.50ರಷ್ಟು ಸಾಲ, ಶೇ.50ರಷ್ಟು ಸಹಾಯಧನದೊಂದಿಗೆ ವೃತ್ತಿ ಪ್ರೋತ್ಸಾಹ ಯೋಜನೆಯನ್ನು ಪರತ್ತುಗಳಿಗೊಳಪಟ್ಟು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಷರತ್ತುಗಳು :-

1. ಈ ಸಾಲ ಸೌಲಭ್ಯವನ್ನು ಮತೀಯ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳಿಗೆ ನೀಡತಕ್ಕದ್ದು
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಗಳಾಗಿರತಕ್ಕದ್ದು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು.
4. ಮತೀಯ ಅಲ್ಪಸಂಖ್ಯಾತರ ಸಮುದಾಯದ ಮಹಿಳೆಯರಿಗೆ ಆದ್ಯತೆ ನೀಡುವುದು.
5. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಮಿತಿಯು ರೂ.1,03,000/-(ನಗರ ಪ್ರದೇಶ) ಮತ್ತು ರೂ.81,000/- (ಗ್ರಾಮೀಣ ಪ್ರದೇಶ) ಮೀರಿರಬಾರದು.
6. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ ಸರ್ಕಾರದ ಸೇವೆಯಲ್ಲಿರಬಾರದು.
7. ಈ ಯೋಜನೆಗೆ ಅರ್ಜಿ ಸಲ್ಲಿಸುವ ಯಾವುದೇ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು. (ಅರಿವು ಯೋಜನೆ ಹೊರತುಪಡಿಸಿ)
8.ಯೋಜನೆಯ ಸಾಲ ಮತ್ತು ಸಹಾಯಧನವನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದಲೇ ಬಿಡುಗಡೆಗೊಳಿಸಲಾಗುವುದು.

ಯೋಜನೆಯಡಿ ಈ ಕೆಳಗಿನ ಚಟುವಟಿಕೆ ಕೈಗೆತ್ತಿಕೊಳ್ಳಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು.

1. ಹಣ್ಣು ಹಂಪಲು, ತರಕಾರಿ, ಕೋಳಿ ಮತ್ತು ಮೀನು ಮಾರಾಟ
2. ಎಳನೀರು, ಕಬ್ಬಿನ ಹಾಲು, ತಂಪುಪಾನೀಯ ಮಾರಾಟ
3. ಬೇಕರಿ, ಲಾಂಡ್ರಿ, ಡ್ರೈಕ್ಲೀನಿಂಗ್, ಹೇರ್ ಡ್ರೆಸಿಂಗ್ ಸಲೂನಿ, ಬ್ಯೂಟಿ ಪಾರ್ಲರ್
4. ವಾಟರ್ ವಾಷ್ ಸರ್ವೀಸ್, ಪಂಚ‌ ಶಾಪ್, ಮೆಕಾನಿಕ್ ಶಾಪ್, ದ್ವಿಚಕ್ರ, ತ್ರಿಚಕ್ರ ವಾಹನ ರಿಪೇರಿ
5. ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ ರಿಪೇರಿ, ರೆಫ್ರಿಜರೇಟರ್ ಮೋ‌ರಿವೇಂಡಿಂಗ್ ವರ್ಕ್ಸ್
6. ಬಿದರಿ ವೇರ್ ಕೆಲಸ, ರೇಷ್ಮೆ ರೀಲಿಂಗ್ ಮತ್ತು ಟ್ವಿಸ್ಟಿಂಗ್, ಆಟಿಕೆಗೊಂಬೆ ತಯಾರಿಕೆ
7. ಈ ಯೋಜನೆಯ ಒಟ್ಟು ಸಾಲದ ಮೊತ್ತ ರೂ.1.00 ಲಕ್ಷ ಇದರಲ್ಲಿ ಶೇ.50 ರಷ್ಟು ಸಾಲ, ಶೇ.50 ರಷ್ಟು ಸಹಾಯಧನವಾಗಿರುತ್ತದೆ.

ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ,
ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಛೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

4 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

4 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

16 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

19 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

20 hours ago