ಚಿಂತಾಮಣಿ:ತಲೆ ಕಡಿದು ಕಸಕ್ಕೆ ಎಸಿದಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಎನ್ ಆರ್ ಬಡವಣೆಯಲ್ಲಿ ಕಳೆದ ರಾತ್ರಿ ನಡೆದಿದೆ.
ಯಾಜ್ಞವಲ್ಕ್ಯ ದೇವಸ್ಥಾನದ ಬಳಿ ರಸ್ತೆಯ ಪಕ್ಕದಲ್ಲಿ ಕಸ ಹಾಕುವ ಜಾಗದಲ್ಲಿ ವ್ಯಕ್ತಿಯ ತಲೆ ಕಡಿದು ಭೀಕರ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
65 ವರ್ಷದ ಮುನಿಯಪ್ಪ ಮೃತ ದುರ್ದೈವಿ ಎಂದು ಗೊತ್ತಾಗಿದೆ. ಆತ ಶ್ರೀನಿವಾಸಪುರ ತಾಲೂಕಿನ ಗೌಡನತಾತಗಡ್ಡ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.
ರುಂಡ ಮುಂಡ ಬೇರ್ಪಡಿಸಿ ಭೀಕರ ಕೊಲೆ ಮಾಡಿರುವ ಕಿರಾತಕರು ತಲೆಯನ್ನು ನಾಯಿಗಳು ಎಳೆದಾಡುವ ವೇಳೆ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದು.
ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್ ನಗರಠಾಣೆ ಇನ್ಸ್ಪೆಕ್ಟರ್ ವಿಜಿ ಕುಮಾರ,ಬೆರಳಚ್ಚು ತಜ್ಞರ ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಮುನಿಯಪ್ಪಗೆ ಇಬ್ಬರು ಹೆಂಡತಿಯರಿದ್ದು ಕಳೆದ ರಾತ್ರಿ ಜಗಳವಾಗಿ ಅವರೇ ಕೊಲೆ ಮಾಡಿರಬಹುದು ಎಂದು ಅವರ ಪುತ್ರ ಮಾಧ್ಯಮದವರಿಗೆ ಹೇಳಿಕೆ ಕೊಟ್ಟಿದ್ದಾನೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…