
ತೋಟದ ಬಳಿ ಹಸು ಮೇಯಿಸುತ್ತಿದ್ದ ವೃದ್ಧೆಯ ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ಕಳ್ಳರು ಕದ್ದೊಯ್ದಿದ್ದಾರೆ…
ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರ ಪಾಳ್ಯದಲ್ಲಿ ಇಂದು ಮಧ್ಯಾಹ್ನ ಸುಮಾರು 12:30ರ ಸಮಯದಲ್ಲಿ ಘಟನೆ ನಡೆದಿದೆ…
ಬೈಕಿನಲ್ಲಿ ಬಂದ ಇಬ್ಬರು ಖದೀಮರು, ಹೊಂಚಾಕಿ ಒಂಟಿಯಾಗಿದ್ದ ನರಸಮ್ಮ (58) ಎಂಬ ವೃದ್ಧೆಯನ್ನು ಟಾರ್ಗೆಟ್ ಮಾಡಿ ಹಿಂದೆಯಿಂದ ಬಂದು ಕೊರಳಿಗೆ ಕೈ ಹಾಕಿ ಸುಮಾರು 30 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ….