ತಾಯಿಗಿಂತ ದೇವರಿಲ್ಲ ಎಂಬ ಮಾತು ಸುಳ್ಳಲ್ಲ. ತಾಯಿಗೆ ತನ್ನ ಮಕ್ಕಳಿಗಿಂತ ಯಾವುದೂ ಮುಖ್ಯವಲ್ಲ. ಮಕ್ಕಳಿಗೆ ತಾಯಿಯೇ ರಕ್ಷಾಕವಚ. ತಾಯಂದಿರು ತಮ್ಮ ಮಕ್ಕಳಿಗಾಗಿ ತಮ್ಮ ಪ್ರಾಣವನ್ನೂ ತ್ಯಾಗ ಮಾಡಲು ಸಿದ್ಧರಿರುತ್ತಾರೆ. ಇದು ಹಲವು ಬಾರಿ ನಡೆದಿದೆ. ಹಗಲು ಹೊತ್ತಿನಲ್ಲಿ ಮಗನನ್ನು ಕೊಲ್ಲಲು ಬಂದ ಹಂತಕರನ್ನು ಕಲ್ಲು ತೆಗೆದುಕೊಂಡು ತಾಯಿಯೇ ಓಡಿಸಿದ ಘಟನೆ ಮಹಾರಾಷ್ಟ್ರದ ಜೈಸಿಂಗ್‌ಪುರದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿ ಮಗ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಮೇಲೆ ಕುಳಿತು ತಾಯಿಯೊಂದಿಗೆ ಮಾತನಾಡುತ್ತಿರುತ್ತಾನೆ. ಅದೇ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಮೂವರು ಬಂದರು. ಅವರಲ್ಲಿ ಒಬ್ಬನು ತನ್ನ ತಾಯಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ವ್ಯಕ್ತಿಯ ಮೇಲೆ ಕತ್ತಿಯನ್ನು ಬೀಸುತ್ತಾನೆ. ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಆ ವ್ಯಕ್ತಿ ಪಾರಾಗಿದ್ದಾನೆ. ತನ್ನ ಮಗನ್ನು ರಕ್ಷಿಸಲು ತಾಯಿ ಕೆಳಗಿನಿಂದ ಕಲ್ಲನ್ನು ಎತ್ತಿ ಕತ್ತಿ ಬೀಸಿದ ವ್ಯಕ್ತಿಯನ್ನು ಹೊಡೆಯಲು ಮುಂದಾದರು. ಕೂಡಲೇ ಕತ್ತಿ ಬೀಸಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.
ಈ ಘಟನೆಗೂ ಮುನ್ನ ಇಬ್ಬರ ನಡುವೆ ಸಣ್ಣ-ಪುಟ್ಟ ಜಗಳ ನಡೆದು ಜಗಳ ತಾರಕಕ್ಕೇರಿದೆ. ಹೇಗೋ ವಿಷಯ ಇತ್ಯರ್ಥವಾಗಿ ಎಲ್ಲರೂ ಹೊರಟರು. ಆದರೆ, ಇದಾದ ಬಳಿಕ ಜೈಸಿಂಗ್‌ಪುರದ ನಂದನಿ ನಾಕಾ ರಸ್ತೆಯಲ್ಲಿ ಸುನೀಲ್ ರಾಮಪ್ಪ ಲಮಾಣಿ ತನ್ನ ತಾಯಿಯೊಂದಿಗೆ ಇದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ಕೂಡಲೇ ಸುನೀಲ್ ಅವರ ತಾಯಿ ಹಂತಕರನ್ನು ಹಿಮ್ಮೆಟ್ಟಿಸಿದ್ದಾರೆ. ವೃದ್ಧ ತಾಯಿಯ ಮಾತೃಪ್ರೀತಿ ಮತ್ತೊಮ್ಮೆ ಜಗತ್ತಿಗೆ ಸಾಬೀತುಪಡಿಸಿದೆ.
ಅದೃಷ್ಟವಶಾತ್, ಕತ್ತಿಯ ದಾಳಿಯಲ್ಲಿ ಸುನೀಲ್ ಗಂಭೀರವಾಗಿ ಗಾಯಗೊಂಡಿಲ್ಲ, ಆದರೂ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ತನ್ನ ಮಗನನ್ನು ರಕ್ಷಿಸಲು ವೃದ್ಧ ತಾಯಿ ದಾಳಿಕೋರರನ್ನು ಓಡಿಸಲು ಯತ್ನಿಸಿದ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.
ಈ ಘಟನೆಯ ನಂತರ ಸುನೀಲ್ ರಾಮಪ್ಪ ಲಮಾಣಿ ಅವರು ವಿನೋದ ಕಾಸು ಪವಾರ್, ಅರವಿಂದ ಕಾಸು ಪವಾರ್ ಮತ್ತು ವಿನೋದ ಬಾಬು ಜಾಧವ್ ವಿರುದ್ಧ ಜೈಸಿಂಗ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದೀಗ ಪೊಲೀಸರು ಸಿಸಿಟಿವಿ ವಿಡಿಯೋ ಆಧರಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…