Categories: ವೈರಲ್

ವೃದ್ಧ ತಾಯಿಯ ಮಾತೃಪ್ರೀತಿಯಿಂದ ಹಂತಕರ ಲಾಂಗ್ ನಿಂದ ಪಾರಾದ ಮಗ: ಮಗನ ರಕ್ಷಾಕವಚವಾಗಿ ನಿಂತ ತಾಯಿ

ತಾಯಿಗಿಂತ ದೇವರಿಲ್ಲ ಎಂಬ ಮಾತು ಸುಳ್ಳಲ್ಲ. ತಾಯಿಗೆ ತನ್ನ ಮಕ್ಕಳಿಗಿಂತ ಯಾವುದೂ ಮುಖ್ಯವಲ್ಲ. ಮಕ್ಕಳಿಗೆ ತಾಯಿಯೇ ರಕ್ಷಾಕವಚ. ತಾಯಂದಿರು ತಮ್ಮ ಮಕ್ಕಳಿಗಾಗಿ ತಮ್ಮ ಪ್ರಾಣವನ್ನೂ ತ್ಯಾಗ ಮಾಡಲು ಸಿದ್ಧರಿರುತ್ತಾರೆ. ಇದು ಹಲವು ಬಾರಿ ನಡೆದಿದೆ. ಹಗಲು ಹೊತ್ತಿನಲ್ಲಿ ಮಗನನ್ನು ಕೊಲ್ಲಲು ಬಂದ ಹಂತಕರನ್ನು ಕಲ್ಲು ತೆಗೆದುಕೊಂಡು ತಾಯಿಯೇ ಓಡಿಸಿದ ಘಟನೆ ಮಹಾರಾಷ್ಟ್ರದ ಜೈಸಿಂಗ್‌ಪುರದಲ್ಲಿ ನಡೆದಿದೆ.‌‌ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಮಗ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಮೇಲೆ ಕುಳಿತು ತಾಯಿಯೊಂದಿಗೆ ಮಾತನಾಡುತ್ತಿರುತ್ತಾನೆ. ಅದೇ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಮೂವರು ಬಂದರು.  ಅವರಲ್ಲಿ ಒಬ್ಬನು ತನ್ನ ತಾಯಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ವ್ಯಕ್ತಿಯ ಮೇಲೆ ಕತ್ತಿಯನ್ನು ಬೀಸುತ್ತಾನೆ.  ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಆ ವ್ಯಕ್ತಿ‌ ಪಾರಾಗಿದ್ದಾನೆ. ತನ್ನ ಮಗನ್ನು ರಕ್ಷಿಸಲು ತಾಯಿ ಕೆಳಗಿನಿಂದ ಕಲ್ಲನ್ನು ಎತ್ತಿ ಕತ್ತಿ ಬೀಸಿದ ವ್ಯಕ್ತಿಯನ್ನು ಹೊಡೆಯಲು ಮುಂದಾದರು. ಕೂಡಲೇ ಕತ್ತಿ‌ ಬೀಸಿದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.

ಈ ಘಟನೆಗೂ ಮುನ್ನ ಇಬ್ಬರ ನಡುವೆ ಸಣ್ಣ-ಪುಟ್ಟ ಜಗಳ ನಡೆದು ಜಗಳ ತಾರಕಕ್ಕೇರಿದೆ. ಹೇಗೋ ವಿಷಯ ಇತ್ಯರ್ಥವಾಗಿ ಎಲ್ಲರೂ ಹೊರಟರು. ಆದರೆ, ಇದಾದ ಬಳಿಕ ಜೈಸಿಂಗ್‌ಪುರದ ನಂದನಿ ನಾಕಾ ರಸ್ತೆಯಲ್ಲಿ ಸುನೀಲ್ ರಾಮಪ್ಪ ಲಮಾಣಿ ತನ್ನ ತಾಯಿಯೊಂದಿಗೆ ಇದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ.  ಕೂಡಲೇ ಸುನೀಲ್ ಅವರ ತಾಯಿ ಹಂತಕರನ್ನು ಹಿಮ್ಮೆಟ್ಟಿಸಿದ್ದಾರೆ. ವೃದ್ಧ ತಾಯಿಯ ಮಾತೃಪ್ರೀತಿ ಮತ್ತೊಮ್ಮೆ ಜಗತ್ತಿಗೆ ಸಾಬೀತುಪಡಿಸಿದೆ.

ಅದೃಷ್ಟವಶಾತ್, ಕತ್ತಿಯ ದಾಳಿಯಲ್ಲಿ ಸುನೀಲ್ ಗಂಭೀರವಾಗಿ ಗಾಯಗೊಂಡಿಲ್ಲ, ಆದರೂ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ತನ್ನ ಮಗನನ್ನು ರಕ್ಷಿಸಲು ವೃದ್ಧ ತಾಯಿ ದಾಳಿಕೋರರನ್ನು ಓಡಿಸಲು ಯತ್ನಿಸಿದ ರೀತಿಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.

ಈ ಘಟನೆಯ ನಂತರ ಸುನೀಲ್ ರಾಮಪ್ಪ ಲಮಾಣಿ ಅವರು ವಿನೋದ ಕಾಸು ಪವಾರ್, ಅರವಿಂದ ಕಾಸು ಪವಾರ್ ಮತ್ತು ವಿನೋದ ಬಾಬು ಜಾಧವ್ ವಿರುದ್ಧ ಜೈಸಿಂಗ್‌ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದೀಗ ಪೊಲೀಸರು ಸಿಸಿಟಿವಿ ವಿಡಿಯೋ ಆಧರಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.  ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Ramesh Babu

Journalist

Recent Posts

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

58 minutes ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

5 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

6 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

12 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

12 hours ago

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

1 day ago