ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಿರ್ಮಿಸಿಕೊಡಲಾದ ‘ವಾತ್ಸಲ್ಯ’ ಮನೆಯನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.
ವಯೋವೃದ್ಧರಾಗಿರುವ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರು ಸ್ವಂತ ಮನೆಯಿಲ್ಲದೆ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಸಿಕ ಪಿಂಚಣಿ ಪಡೆಯುತ್ತಿದ್ದ ಇವರ ಪರಿಸ್ಥಿತಿಯನ್ನು ಗುರುತಿಸಿದ ಯೋಜನೆಯು, ದಂಪತಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಟ್ಟಿದೆ.
ನೂತನ ‘ವಾತ್ಸಲ್ಯ’ ಮನೆಯ ಹಸ್ತಾಂತರವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ ಅವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಹಾಲಿಂಗಯ್ಯ, ಜಿಲ್ಲಾ ನಿರ್ದೇಶಕ ಉಮಾರಬ್ಬ, ಮೆಣಸಿ ಹಾಲಿನ ಡೇರಿ ಅಧ್ಯಕ್ಷ ಪಾಪಣ್ಣ, ತಾಲೂಕು ಯೋಜನಾಧಿಕಾರಿ ದಿನೇಶ್ ಹಾಗೂ ಜ್ಞಾನವಿಕಾಸ ಯೋಜನಾಧಿಕಾರಿ ಸಂಗೀತಾ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…